ಬೆಳಗಾವಿ, ಡಿ 19 (DaijiworldNews/PC) : ರಾಜ್ಯವನ್ನೇ ಬೆಚ್ಚಿಬಿದ್ದ ಬೆಳಗಾವಿಯಲ್ಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕುಟುಂಬಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಿಎಂ ಸಿದ್ದರಾಮಯ್ಯ ನಿಧಿಯಿಂದ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ ಐದು ಲಕ್ಷದ ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 2 ಎಕರೆ ಜಮೀನು ಮಂಜೂರಾಗಿದೆ ಎಂದು ಹೇಳಿದರು.
ಸಿಐಡಿ ತನಿಖೆಗೂ ಮುನ್ನವೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೂ ಪ್ರಕರಣವನ್ನು ಸರ್ಕಾರ ತನಿಖೆಯನ್ನು ಸಿಐಡಿಗೆ ಒಪ್ಪಿಸಿದೆ. ತನಿಖೆ ಬಗ್ಗೆ ಯಾವುದೇ ಸಂಶಯ ಬೇಡ ಎಂದು ಸಿಐಡಿಗೆ ಕೊಟ್ಟಿದ್ದಾರೆ.ಇಂತಹದೊಂದು ಘಟನೆ ಆಗಬಾರದಿತ್ತು, ಆದರೆ ನಮ್ಮ ಭಾಗದಲ್ಲಿ ಆಗಿದೆ. ಮುಂದೆ ಇಂತಹ ಘಟನೆ ಆಗದಂತೆ ಎಲ್ಲರೂ ಪ್ರಯತ್ನ ಮಾಡೋಣ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.