ನವದೆಹಲಿ, ಡಿ 20 (DaijiworldNews/PC) : ದೇಶದಲ್ಲಿ ಅಂಚೆ ಕಚೇರಿಗೆ ಬರುವ ಪತ್ರಗಳನ್ನು ಇನ್ನುಮುಂದೆ ಯಾವುದೇ ಸರ್ಕಾರಿ ಅಧಿಕಾರಿಗಳು ತೆರೆದು ನೋಡುವ ಹಾಗೂ ಮುಟ್ಟುಗೋಲು ಹಾಕುವ ಅಧಿಕಾರ ನೀಡುವ ಮಸೂದೆಗೆ ಲೋಕಸಭೆ ಒಪ್ಪಿಗೆ ನೀಡಿದೆ.
ದೇಶದ ಭದ್ರತೆಯ ದೃಷ್ಟಿಯಿಂದ ಈ ಮಸೂದೆಗೆ ಒಪ್ಪಿಗೆಯನ್ನು ನೀಡಲಾಗಿದ್ದು ಪತ್ರಗಳು ಮಾತ್ರವಲ್ಲದೇ ಖಾಸಗಿ ಕೊರಿಯರ್ ಗಳನ್ನೂ ಈ ಮಸೂದೆ ವ್ಯಾಪ್ತಿಗೆ ತರಲಾಗಿದೆ.
ಈ ಮಸೂದೆ ಪ್ರಕಾರ ಕೊರಿಯರ್ ಕಚೇರಿಗೆ ಬರುವ ಶಂಕಾಸ್ಪದ ಪತ್ರಗಳನ್ನು ಅಥವಾ ಯಾವುದೇ ವಸ್ತುಗಳನ್ನು ತೆರೆದು ನೋಡಿ ಮುಟ್ಟುಗೋಲು ಹಾಕುವ ಅಧಿಕಾರ ಇದೀಗ ಸರ್ಕಾರಕ್ಕೆ ದೊರಕಿದ್ದು, ಈ ಹೊಸ ಕಾಯ್ದೆ 125 ವರ್ಷಗಳಷ್ಟು ಹಳೆಯ ಅಂಚೆ ಕಚೇರಿ ಕಾಯ್ದೆಯನ್ನು ಬದಲಿಸಿದೆ.
ಈ ಮಸೂದೆಗೆ ರಾಜ್ಯಸಭೆಯಲ್ಲಿ ಡಿಸೆಂಬರ್ 4 ರಂದೇ ಅಂಗೀಕಾರ ದೊರೆತಿದ್ದು ಸಂಸತ್ನಲ್ಲಿ ಭದ್ರತಾ ಲೋಪದ ಬಗ್ಗೆ ಅಮಿತ್ ಶಾ ಉತ್ತರ ನೀಡಬೇಕು ಎಂದು ವಿಪಕ್ಷಗಳು ಗದ್ದಲ ನಡೆಸಿದ ಸಂದರ್ಭದಲ್ಲಿಯೇ ಈ ಮಸೂದೆಯನ್ನು ಅಂಗೀಕರಿಸಲಾಗಿದೆ.