ನವದೆಹಲಿ,ಡಿ 20 (DaijiworldNews/PC) : 20 ವರ್ಷದಿಂದ ಇಂಥ ಅವಮಾನ ಎದುರಿಸುತ್ತಾ ಬಂದಿದ್ದೇನೆ. ಈಗಲೂ ಅವಮಾನಗಳಾಗುತ್ತಿವೆ ಎಂದು ಉಪರಾಷ್ಟ್ರಪತಿ ಬಳಿ ಪ್ರಧಾನಿ ಹೇಳಿಕೊಂಡಿದ್ದಾರೆ.
ಸಂಸದರ ಅಮಾನತು ವಿರುದ್ಧ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿದ್ದ ರಾಜ್ಯಸಭಾ ಸಭಾಪತಿ, ಹಾಗೂ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಅಣಕಿಸಿದ್ದು ವಿವಾದಕ್ಕೆ ಕಾರಣವಾಗಿದ್ದು ಪ್ರಧಾನಿ ಮೋದಿ ಕರೆಮಾಡಿ ಸಾಂತ್ವನ ಹೇಳಿದ್ದಾರೆ.
ನೂತನ ಸಂಸತ್ನಲ್ಲಿ ಆದ ಭದ್ರತಾ ಲೋಪ ಘಟನೆಯನ್ನು ಖಂಡಿಸಿ ವಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಇದಕ್ಕಾಗಿ ಹಲವನ್ನೂ ಅಮಾನತೂ ಮಾಡಲಾಗಿದ್ದು ಅಮಾನತುಗೊಂಡ ಸಂಸದರು ಸಂಸತ್ ಭವನದೊಳಗೆಯೇ ಪ್ರತಿಭಟನೆ ಮಾಡಿದ್ದರು.
ಕಾಂಗ್ರೆಸ್ ನಾಯಕ ಕಲ್ಯಾಣ್ ಬ್ಯಾನರ್ಜಿ ಅವರು ಉಪರಾಷ್ಟ್ರಪತಿ ಧಂಖರ್ ಅವರನ್ನು ಅಣುಕಿಸಿದ ವಿಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಸಾಂತ್ವನ ಹೇಳಿದ ಕುರಿತು ಟ್ವೀಟ್ ಮಾಡಿದ ಉಪರಾಷ್ಟ್ರಪತಿಗಳು ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಕರೆ ಮಾಡಿ ಕೆಲ ಸಂಸದರು ಅಣುಕಿಸಿದ ಕೆಲಸಗಳಿಂದ ಬಹಳ ನೋವಾಗಿದೆ ಎಂದು ಸಮಾಧಾನ ಹೇಳಿದ್ದಾರೆ’ ಎಂದು ಜಗದೀಪ್ ಧನಖರ್ ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.