ಬೆಂಗಳೂರು, ಡಿ 20 (DaijiworldNews/MS): ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (ಕೆಎಸ್ಡಿಎಲ್) ಟೆಂಡರ್ಗಾಗಿ ಲಂಚ ಪಡೆದ ಆರೋಪದಲ್ಲಿ ಬಿಜೆಪಿಯ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿ ಹೈಕೋರ್ಟ್ಆದೇಶ ಹೊರಡಿಸಿದೆ.
ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17 A ಪ್ರಕಾರ ಪ್ರಕ್ರಿಯೆ ಪಾಲಿಸಿಲ್ಲ,ಶಾಸಕರಾಗಿದ್ದೂ ಅವರ ವಿರುದ್ದ ಪೂರ್ವಾನುಮತಿ ಪಡೆಯದೆ ಪ್ರಕರಣ ದಾಖಲಿಸಲಾಗಿದೆ ಎಂದು ಮಾಡಾಳ್ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದ್ದರು. ವಕೀಲರ ವಾದ ಪುರಸ್ಕರಿಸಿದ ಹೈಕೋರ್ಟ್, ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ.