ರಾಯಚೂರು,ಏ19(Daijiworld News/AZM):ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಹಾಗೂ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಇಂದು ಟ್ವೀಟ್ ಮಾಡಿರುವ ಸಿಎಂ ಕುಮಾರಸ್ವಾಮಿ ' ವಿದ್ಯಾರ್ಥಿನಿ ಸಾವು ಪ್ರಕರಣ ಅತೀವ ನೋವು ತಂದಿದೆ. ವಿದ್ಯಾರ್ಥಿನಿಯ ಹೆತ್ತವರಿಗೆ ಭಗವಂತ ನೋವು ಭರಿಸುವ ಶಕ್ತಿ ನೀಡಲಿ ಎಂದು ಹೇಳಿದ್ದಾರೆ.
ಪ್ರಕರಣದ ಕುರಿತು ರಾಯಚೂರು ಎಸ್ ಪಿ ಅವರಿಂದ ಮಾಹಿತಿ ಪಡೆದಿದ್ದು. ಒಬ್ಬನನ್ನು ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆಯಲಿದೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.