ಬೆಂಗಳೂರು, ಡಿ, 23 (daijiworldNews/AK):ರಾಜ್ಯ ಬಿಜೆಪಿ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾರ್ಯದರ್ಶಿಗಳು, ಖಜಾಂಚಿ ಮತ್ತು 7 ಮೋರ್ಛಾಗಳ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪದಾಧಿಕಾರಿಗಳ ಪಟ್ಟಿಯಲ್ಲಿ 6 ಶಾಸಕರು, ವಿಧಾನಪರಿಷತ್ನ ಓರ್ವ ಸದಸ್ಯ, 10 ಮಾಜಿ ಶಾಸಕರಿಗೆ ಅವಕಾಶ ನೀಡಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ 6 ಆಪ್ತರು, ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ವಿಜಯೇಂದ್ರರ ಇಬ್ಬರು ಆಪ್ತರಿಗೆ ಸ್ಥಾನ ನೀಡಲಾಗಿದೆ. ಬಿಜೆಪಿಗೆ ಬಂದಿದ್ದ 17 ವಲಸಿಗರ ಪೈಕಿ ಭೈರತಿ ಬಸವರಾಜ್ಗೆ ಮತ್ತು 6 ಮಹಿಳೆಯರಿಗೆ ಸ್ಥಾನ ನೀಡಲಾಗಿದೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ: ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಬೈರತಿ ಬಸವರಾಜ, ರಾಜೂ ಗೌಡ ನಾಯಕ್, ಎನ್. ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ ನಾಯಕ್, ಡಾ. ಬಸವರಾಜ ಕೇಲಗಾರ, ಮಾಳವಿಕಾ ಅವಿನಾಶ್ ಮತ್ತು ಎಂ. ರಾಜೇಂದ್ರ ನೇಮಕ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ: ವಿ. ಸುನೀಲ್ ಕುಮಾರ್, ಪಿ. ರಾಜೀವ್, ಎನ್.ಎಸ್. ನಂದೀಶ್ ರೆಡ್ಡಿ ಮತ್ತು ಜೆ. ಪ್ರೀತಮ್ ಗೌಡ ನೇಮಕ.
ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾಗಿ: ಶೈಲೇಂದ್ರ ಬೆಲ್ದಾಳೆ, ಡಿ.ಎಸ್. ಅರುಣ್, ಬಸವರಾಜ ಮತ್ತಿಮೂಡ, ಸಿ. ಮುನಿರಾಜು, ವಿನಯ್ ಬಿದರೆ, ಕ್ಯಾ. ಬ್ರಿಜೇಶ್ ಚೌಟ, ಶರಣು ತಳ್ಳಿಕೇರಿ, ಲಲಿತಾ ಅನಾಪುರ, ಡಾ. ಲಕ್ಷ್ಮೀ ಅಶ್ವಿನ್ ಗೌಡ, ಅಂಬಿಕಾ ಹುಲಿನಾಯ್ಕರ್ ನೇಮಕ.
ರಾಜ್ಯ ಖಜಾಂಚಿಯಾಗಿ: ಸುಬ್ಬನರಸಿಂಹ ನೇಮಕ.
ಮಹಿಳಾ ಮೋರ್ಛಾ ರಾಜ್ಯಾಧ್ಯಕ್ಷೆಯಾಗಿ: ಸಿ. ಮಂಜುಳಾ
ಯುವ ಮೋರ್ಛಾ ರಾಜ್ಯಾಧ್ಯಕ್ಷರಾಗಿ: ಧೀರಜ್ ಮುನಿರಾಜು ನೇಮಕ
ಎಸ್ಟಿ ಮೋರ್ಛಾ ರಾಜ್ಯಾಧ್ಯಕ್ಷರಾಗಿ: ಬಂಗಾರು ಹನುಮಂತು
ಎಸ್ಸಿ ಮೋರ್ಛಾ ರಾಜ್ಯಾದ್ಯಕ್ಷರಾಗಿ: ಎಸ್. ಮಂಜುನಾಥ್
ಒಬಿಸಿ ಮೋರ್ಛಾ ರಾಜ್ಯಾಧ್ಯಕ್ಷರಾಗಿ: ರಘು ಕೌಟಿಲ್ಯ
ರೈತ ಮೋರ್ಛಾ ರಾಜ್ಯಾದ್ಯಕ್ಷರಾಗಿ: ಎ.ಎಸ್. ಪಾಟೀಲ್ ನಡಹಳ್ಳಿ
ಅಲ್ಪಸಂಖ್ಯಾತ ಮೋರ್ಛಾದ ರಾಜ್ಯಾಧ್ಯಕ್ಷರಾಗಿ: ಅನಿಲ್ ಥಾಮಸ್