ಬೆಂಗಳೂರು, ಡಿ 24(DaijiworldNews/SK): ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೊರೊನಾ ಭೀತಿ ಜನರನ್ನು ನಿದ್ದೆ ಗೆಡಿಸುತ್ತಿದೆ. ಇದೀಗ ರಾಜ್ಯದಲ್ಲಿ ಇಂದು ೧೦೬ ಜನರಿಗೆ ಕೊರೊನಾ ಸೊಂಕು ದೃಢಪಟ್ಟಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 344 ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ
ಬೆಂಗಳೂರು ನಗರದಲ್ಲಿ 95 ಜನರಲ್ಲಿ ಕೊರೊನ ಸೋಂಕು ಪತ್ತೆಯಾಗಿದ್ದು, ಇನ್ನುಳಿದಂತೆ ಮೈಸೂರು 6, ದಕ್ಷಿಣ ಕನ್ನಡ ಇಬ್ಬರಿಗೆ ಹಾಗೂ ಮಂಡ್ಯ, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಯಲ್ಲಿ ತಲಾ ಒಬ್ಬರಲ್ಲಿ ಕೊರೊನಾ ಸೋಂಕಿನೊಂದಿಗೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿ ರೇಟ್ ಶೇಕಡಾ 7.35ರಷ್ಟಿದೆ ಎಂದು ತಿಳಿದು ಬಂದಿದೆ.
ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 322 ಹೊಸ ಕೊರೊನಾ ಪ್ರಕರಣಗಳು ಮತ್ತು ಒಂದು ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.