ನವದೆಹಲಿ, ಡಿ 25(daijiworldNews/MS): 2024 ರ ಚುನಾವಣೆಯ ಮೊದಲು ಎರಡನೇ ಭಾರತ್ ಜೋಡೋ ಯಾತ್ರೆಯನ್ನು ಕಾಂಗ್ರೆಸ್ ನಿರ್ಧರಿಸಿದೆ ಎನ್ನಲಾಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆಯ ಮೊದಲ ಹಂತವು 2022ರ ಸೆಪ್ಟೆಂಬರ್ 7 ರಂದು ಆರಂಭವಾಗಿ ಜನವರಿ 30 ರಂದು ಕೊನೆಗೊಂಡಿತ್ತು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಮೊದಲ ಹಂತದ ಭಾರತ್ ಜೋಡೋ ಯಾತ್ರೆಯನ್ನು ಕೈಗೊಂಡಿದ್ದರು. ಸರಿಸುಮಾರು 4,080 ಕಿಲೋಮೀಟರ್ಗಳಷ್ಟು ದೂರವನ್ನು ಕ್ರಮಿಸುವ ಯಾತ್ರೆಯು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಮುಕ್ತಾಯವಾಯಿತು.
ಯಾತ್ರೆಯು 12 ರಾಜ್ಯಗಳ 75 ಜಿಲ್ಲೆಗಳ ಮೂಲಕ 136 ದಿನ ಸಾಗಿದ್ದು ಭಾರತದ ಇತಿಹಾಸದಲ್ಲೇ ಸುದೀರ್ಘ ಪಾದಯಾತ್ರೆಯಾಗಿತ್ತು.
ಭಾರತ್ ಜೋಡೋ ಯಾತ್ರೆ 2.0 ಜನವರಿಯಿಂದ ದೇಶದ ಪೂರ್ವದಿಂದ ಪಶ್ಚಿಮಕ್ಕೆ ಹೋದಲಿದ್ದು ಜನವರಿ ಮೊದಲ ವಾರದಿಂದಲೇ ಯಾತ್ರೆ ಆರಂಭವಾಗಬಹುದು. ಮೂಲಗಳ ಪ್ರಕಾರ, 2024 ರ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜತೆಯಾಗಿ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡಾ ಇರಲಿದ್ದಾರೆ ಎನ್ನಲಾಗಿದೆ.
ಇದರೊಂದಿಗೆ ಲೋಕಸಭೆಯ ಚುನಾವಣೆ ಸಮೀಪವಾದ ಹಿನ್ನೆಲೆ ನಾಲ್ಕೈದು ತಿಂಗಳು ರಸ್ತೆಯಲ್ಲಿಯೇ ಸಮಯ ಕಳೆಯಲು ಸಾಧ್ಯವಿಲ್ಲ ಎನ್ನುವುದನ್ನು ಗಮನಿಸಲಾಗಿದೆ. ಹೀಗಾಗಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಎರಡನೇ ಹಂತದ ಭಾರತ್ ಜೋಡೋ ಯಾತ್ರೆ ಹೈಬ್ರಿಡ್ ಮೋಡ್ನಲ್ಲಿರಲಿದೆ, ಯಾತ್ರೆಯಲ್ಲಿ ಭಾಗವಹಿಸುವವರು ಕಾಲ್ನಡಿಗೆಯಲ್ಲಿ ಅಥವಾ ಮತ್ತು ವಾಹನ ಬಳಬಹುದಾಗಿದ್ದು ರಾಹುಲ್ಗಾಂಧಿ ಮಾತ್ರ ಕಾಲ್ನಡಿಗೆಯಲ್ಲಿ ಯಾತ್ರೆ ಮಾಡಲಿದ್ದಾರೆ ಎನ್ನಲಾಗಿದೆ.
್