ಬೆಂಗಳೂರು, ಡಿ 26 (DaijiworldNews/AK): ಹೊಸ ವರ್ಷದ ಆಚರಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಬೆಂಗಳೂರು ನಗರ ಸೇರಿದಂತೆ ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು ನಗರಗಳಲ್ಲಿಯೂ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಪೊಲೀಸರು ಮುನ್ನೆಚ್ವರಿಕೆ ವಹಿಸಿದ್ದಾರೆ. ಈಗಾಗಲೇ ಪೊಲೀಸ್, ಅಗ್ನಿಶಾಮಕ, ಗುಪ್ತದಳ, ಆರೋಗ್ಯ , ಅಬಕಾರಿ ಇಲಾಖೆ, ಬಿಬಿಎಂಪಿ, ಬಿಎಂಟಿಸಿ ಸೇರಿದಂತೆ ಇನ್ನಿತರ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿ, ಕೆಲವು ನಿರ್ದೇಶನಗಳನ್ನು ನೀಡಿದ್ದೇನೆ ಎಂದರು.
ಕೋವಿಡ್ ಜೆಎನ್ 1 ಕುರಿತು ಕೇಂದ್ರ ಸರ್ಕಾರ ಅಡ್ವೈಸರಿ ಕಳುಹಿಸಿದ್ದು, ಅಷ್ಟೊಂದು ಪರಿಣಾಮಕಾರಿಯಾಗಿಲ್ಲ. ಮುಂಜಾಗ್ರತೆ ವಹಿಸುವುದು ಅಗತ್ಯ. ಹೀಗಾಗಿ ಅರವತ್ತು ವರ್ಷ ಮೇಲ್ಪಟ್ಟವರು ಹಾಗೂ ಹೆಚ್ಚು ಜನ ಸೇರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚನೆಗಳನ್ನು ನೀಡಿದೆ.
ಆರೋಗ್ಯ ಇಲಾಖೆಯು ಗೃಹ ಇಲಾಖೆಗೆ ಪ್ರತ್ಯೇಕವಾಗಿ ಸೂಚನೆಗಳನ್ನು ಕೊಟ್ಟಿಲ್ಲ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿ ಹೊಸ ವರ್ಷ ಆಚರಿಸಬೇಕು ಎಂದು ತಿಳಿಸಿದರು.