ಬಾಗಲಕೋಟೆ, ಡಿ 27 (DaijiworldNews/AK):ರಾಮ ಮಂದಿರ ನಿರ್ಮಾಣ ಮಾಡಿರುವುದು ಒಳ್ಳೆಯದು. ಆದರೆ, ಎಲ್ಲರನ್ನೂ ಸಾಮಾಜಿಕ, ಆರ್ಥಿಕ ಸಮಾನತೆಯಿಂದ ಕಾಣುವ ರಾಮರಾಜ್ಯ ನಿರ್ಮಾಣ ಯಾವಾಗ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ, ರಾಜ್ಯದಲ್ಲಿ ಆಡಳಿತ ಯಾವುದೇ ಧರ್ಮ ಗ್ರಂಥದ ಆಧಾರದ ಮೇಲೆ ನಡೆಯುತ್ತಿಲ್ಲ. ಬಸವ, ಬುದ್ಧನ ತತ್ವ ಹಾಗೂ ಅಂಬೇಡ್ಕರ್ ಸಂವಿಧಾನದ ಮೇಲೆ ನಡೆಯುತ್ತಿದೆ. ಸಮಾನ ಅವಕಾಶ ನೀಡದ ಧರ್ಮ ನಂಬುವ ಪ್ರಶ್ನೆಯೇ ಇಲ್ಲ ಎಂದರು. ನಿರುದ್ಯೋಗ ರಹಿತ, ಬೆಲೆ ಏರಿಕೆ ನಿಯಂತ್ರಿಸುವ, ಆರ್ಥಿಕ ಸಬಲತೆಯ ಆಡಳಿತದ ಜನರ ನಿರೀಕ್ಷೆ ಹುಸಿಯಾಗಿದೆ ಎಂದು ಟೀಕಿಸಿದರು.
ರಾಜ್ಯದ ಹಿತಾಸಕ್ತಿ, ಜನರಿಗೆ ಸತ್ಯ ತಿಳಿಸುವುದಕ್ಕಾಗಿ ಕೋವಿಡ್ ಸಂದರ್ಭದಲ್ಲಿ ನಡೆದ 40 ಸಾವಿರ ಕೋಟಿ ಮೊತ್ತ ಹಗರಣದ ದಾಖಲೆಗಳನ್ನು ಬಿಡುಗಡೆಮಾಡಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಆರೋಪ ಮಾಡಿದಾಗ ಸುಳ್ಳು ಎಂದು ಹೇಳುತಿದ್ದ ಬಿಜೆಪಿ ನಾಯಕರು ಎಲ್ಲಿದ್ದಾರೆ? ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ
ನಾಯಕ ಆರ್. ಅಶೋಕ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋ ಟ ಶ್ರೀ ನಿವಾಸ ಪೂಜಾರಿ ಜನರಿಗೆ ಉತ್ತರಿಸಬೇಕು ಎಂದು ಒತ್ತಾಯಿಸಿದರು.