ಬೆಂಗಳೂರು, ಜ 01 (DaijiworldNews/MS): ಕಾಂಗ್ರೆಸ್ ನಾಯಕ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಅವರು ಕೇರಳ ಮೂಲದ ಜೈಹಿಂದ್ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಸಿಬಿಐ ನೋಟಿಸ್ ಜಾರಿಮಾಡಿದೆ.
ಜೈಹಿಂದ್ ಕಮ್ಯುನಿಕೇಷನ್ಸ್ ಪ್ರೈವೇಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್.ಶಿಜು ಅವರಿಗೆ ಜನವರಿ 11 ರಂದು ತನಿಖಾಧಿಕಾರಿಗಳು ಕೋರಿದ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವಂತೆ ಸಿಬಿಐ ಹೇಳಿದೆ
CrPC ಯ ಸೆಕ್ಷನ್ 91 ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ. ಶಿವಕುಮಾರ್, ಅವರ ಪತ್ನಿ ಉಷಾ ಶಿವಕುಮಾರ್, ಮಗ ಮತ್ತು ಇತರ ಕುಟುಂಬ ಸದಸ್ಯರು ಮಾಡಿದ ಹೂಡಿಕೆಗಳು, ಅವರಿಗೆ ಪಾವತಿಸಿದ ಲಾಭಾಂಶಗಳು, ಷೇರು ವಹಿವಾಟುಗಳು, ಹಿಡುವಳಿ ವಿವರಗಳು, ಅವರ ಲೆಡ್ಜರ್ ಖಾತೆಗಳು ಮತ್ತು ಒಪ್ಪಂದದ ಟಿಪ್ಪಣಿಗಳ ವಿವರಗಳ ಸಮೇತ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ತನ್ನ ಮುಂದೆ ಹಾಜರಾಗುವಂತೆ ತಿಳಿಸಿದೆ.