ಶಿವಮೊಗ್ಗ,ಡಿ 03 (DaijiworldNews/AK):ರಾಜ್ಯ ಸರಕಾರದ 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಜ.12 ರಂದು ಚಾಲನೆ ನೀಡಲಿದ್ದೇವೆ ಎಂದು ವೈದ್ಯಕೀಯ ಮತ್ತು ಕೌಶ್ಯಲಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ರಾಜ್ಯದ ಐದನೇ ಗ್ಯಾರಂಟಿ ಯೋಜನೆಯಾದ ‘ಯುವನಿಧಿ’ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮಕ್ಕಾಗಿ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಸ್ಥಳ ಪರಿಶೀಲನೆ ಮಾಡಿದ್ದೇವೆ. ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಯುವಕರು ಬರುವ ನಿರೀಕ್ಷೆ ಇದೆ ಎಂದು ಹೇಳಿದರು.
ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ 12ರಂದು ಯೋಜನೆಗೆ ಚಾಲನೆ ನೀಡಲಾಗುವುದು ಈ ಕುರಿತು ಸ್ಥಳ ಪರಿಶೀಲನೆ ನಡೆಸಲು ಸಚಿವರಾದ ಮಧು ಬಂಗಾರಪ್ಪ, ಎಂಸಿ ಸುಧಾಕರ್, ಶಾಸಕರಾದ ಬೇಳೂರು ಗೋಪಾಲಕೃಷ್ಣ ಬಂದಿದ್ದೇ ವೆ. ಸಚಿವರಾದ ಮಧು ಬಂಗಾರಪ್ಪ ಕಾರ್ಯಕ್ರಮದ ನೇತೃತ್ವ ವಹಿಸಿಕೊಂಡಿದ್ದಾರೆ ಎಂದು ಹೇಳಿದರು.ಮಂಗಳವಾರದವರೆಗೆ ( ಜ.2) ಸುಮಾರು 25 ಸಾವಿರ ಮಂದಿ ನೊಂದಣಿಯಾಗಿದ್ದು,ಇನ್ನೂ ಮುಂದುವರೆಯಲಿದೆ ಎಂದು ಹೇಳಿದರು. ಯೋಜನೆಯ ಚಾಲನೆಯ ದಿನ ಡಿಪ್ಲೊಮಾ ಹಾಗೂ ಪದವೀಧರರಿಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದರು.