ಚಿಕ್ಕಮಗಳೂರು, ಜ 07 (DaijiworldNews/HR): ರಾಮ ಮಂದಿರ ಉದ್ಘಾಟನೆ ಆಗುತ್ತಿರುವ ಸಂದರ್ಭ ಕೋಮು ಗಲಭೆ ನಡೆಸಲು ಕಾಂಗ್ರೆಸ್ ಪ್ಲಾನ್ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಮಾನಸಿಕ ಸ್ಥಿತಿ ದೇಶದಲ್ಲಿ ಕೋಮು ಗಲಭೆ ಎಬ್ಬಿಸುತ್ತದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ದೇಶದಲ್ಲಿ ಭಯೋತ್ಪಾದನೆ ಕೃತ್ಯ ನಡೆದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಭಯೋತ್ಪಾದನೆಗೆ ಸಂಪೂರ್ಣ ಕಡಿವಾಣ ಬಿದ್ದಿದ್ದು, ದೇಶ ಶಾಂತವಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ವಿದ್ವಾಂಸಕ ಕೃತ್ಯ ನಡೆಸುವ ಸಂಚು ನಡೆದಿದ್ದರೂ, ರಾಜ್ಯ ಸರ್ಕಾರ ಗಂಭೀರವಾಗಿ ತಗೆದುಕೊಳ್ಳುತ್ತಿಲ್ಲ. ಭಯೋತ್ಪಾದಕರನ್ನು, ದೇಶದ್ರೋಹಿಗಳನ್ನು ರಕ್ಷಣೆ ಮಾಡುವ ಕೆಲಸವನ್ನು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.