ಬೆಂಗಳೂರು, ಜ 07 (DaijiworldNews/HR): ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗವು ಸೈಬರ್ ಕ್ರೈಂಗೆ ದೂರು ನೀಡಿದೆ.
ರಾಷ್ಟ್ರ ರಕ್ಷಣಾ ಪಡೆ ವಾಟ್ಸಾಪ್ ಗ್ರೂಪ್ನಲ್ಲಿ ಸಂದೇಶ ರವಾನಿಸುವ ಮೂಲಕ ಕೋಮುಗಲಭೆ ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಪುನೀತ್ ಕೆರೆಹಳ್ಳಿ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ.
ಇನ್ನು ಕರ್ನಾಟಕದಲ್ಲಿ ಕೋಮುಗಲಭೆ ಎಬ್ಬಿಸೋದಕ್ಕೆ ಬಿಜೆಪಿ ಬೆಂಬಲ ಕೊಟ್ಟಿದ್ದು, ಎಲ್ಲಾ ಕಾರ್ಯಕರ್ತರು ರೆಡಿಯಾಗಿ ಇರಿ. ಎಲ್ಲಿ ಏನು ಮಾಡಬೇಕು ಅಂತ ಈ ಗ್ರೂಪಿನ ಮೂಲಕ ಮಾಹಿತಿ ಕೊಡುತ್ತೇವೆ. ಜೈ ರಾಷ್ಟ್ರ ರಕ್ಷಣಾ ಪಡೆ 2024ಕ್ಕೆ ಮತ್ತೊಮ್ಮೆ ಮೋದಿ ಎಂಬ ಸಂದೇಶ ಹಾಕಿ ಕೋಮುಗಲಭೆಗೆ ಯತ್ನ ನಡೆಯುತ್ತಿದೆ ಎಂದು ಕಾಂಗ್ರೆಸ್ ದೂರು ನೀಡಿದೆ.