ಬೆಂಗಳೂರು, , ಜ 7 (DaijiworldNews/AK): ಜೆಡಿಎಸ್ ಪಕ್ಷವನ್ನು ಮುಗಿಸುವುದೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಉದ್ದೇಶವಾಗಿದೆ ಇಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೆಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಕೇಂದ್ರದ ಕೃಷಿ ಹಾಗೂ ಬುಡಕಟ್ಟು ವ್ಯವಹಾರಗಳ ಖಾತೆ ಸಚಿವ ಅರ್ಜುನ್ ಮುಂಡಾ ಅವರನ್ನು ಬೀಳ್ಕೊಟ್ಟ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದವರು,ದೇವೇಗೌಡರ ಬಗ್ಗೆ ಸಿಎಂ ಹೇಳಿಕೆ ನೀಡಿದ್ದಾರೆ. ಮಾತನಾಡುವವರು ಏನೇನು ಮಾಡಿದ್ದಾರೆ ಎನ್ನುವುದನ್ನು ನೋಡಿಕೊಂಡು ಬಂದಿದ್ದೇನೆ ಎಂದರು.
ಜೆಡಿಎಸ್ ಮುಗಿಸಬೇಕು ಅನ್ನೋದೇ ಅವರ ಅಜೆಂಡಾ. ಆ ಇಬ್ಬರು ನಾಯಕರ ಅಜೆಂಡಾ ಇದೇ ಆಗಿದೆ ಎಂದು ಕಿಡಿಕಾರಿದರು.ಕ್ಷೇತ್ರದ ಕೆಲಸಕ್ಕೆ ನಮ್ಮ ಶಾಸಕರು ಹೋದರೆ ಕೂರಿಸಿಕೊಂಡು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಗೆ ಬನ್ನಿ ಅಂತಾರೆ. ಏನ್ ಬೇಕೋ ಅದನ್ನು ಮಾಡಿಕೊಡುತ್ತೇವೆ ಎನ್ನುತ್ತಿದ್ದಾರೆ. ಎಷ್ಟು ಕೋಟಿ ಬೇಕೋ ಅದನ್ನು ಮಾಡಿಕೊಡುತ್ತೇವೆ ಎನ್ನುತ್ತಿದ್ದಾರೆ. ಎಷ್ಟು ಕೋಟಿ ಬೇಕೋ ಅಷ್ಟು ಕೊಡ್ತೀವಿ,. ಯಾವ ಕಾರಣಕ್ಕೆ ಇದನ್ನು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.