ಬೆಂಗಳೂರು,ಜ 7 (DaijiworldNews/AK ): ಡಿಜೆ ಹಳ್ಳಿ- ಕೆಜೆ ಹಳ್ಳಿ ಪ್ರಕರಣದಲ್ಲಿ ಕಾಂಗ್ರೆಸ್ ಸರಕಾರವು ತುಷ್ಟೀಕರಣ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಆರೋಪಿಸಿದರು.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಮೂರು ರಾಜ್ಯಗಳಲ್ಲಿ ಅಧಿಕಾರ ಕಳಕೊಂಡಿದೆ. ಕಾಂಗ್ರೆಸ್ ಪಕ್ಷವು ಹೀನಾಯ ಸ್ಥಿತಿಗೆ ತಲುಪಿದೆ ಎಂದು ವಿವರಿಸಿದರು.
ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯು ಎಲ್ಲ ಸೀಟುಗಳನ್ನು ಗೆದ್ದುಕೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ವಿಧಾನಪರಿಷತ್ ಸದಸ್ಯ ಕೇಶವ ಪ್ರಸಾದ್ ಅವರು ಈ ಸಂದರ್ಭದಲ್ಲಿ ಇದ್ದರು.