ಬೆಂಗಳೂರು, ಜ 08 (DaijiworldNews/ AK): ಸಂವಿಧಾನ ಜಾರಿಗೆ ಬಂ ದು 75ನೇ ವರ್ಷಾಚರಣೆಯ ಅಂಗವಾಗಿ ಅರಮನೆ ಮೈದಾನದಲ್ಲಿ ಫೆ. 24 ಮತ್ತು 25ರಂದು ‘ಸಂವಿಧಾನ ಮತ್ತು ರಾಷ್ಟ್ರೀ ಯ ಏಕತೆ ಸಮಾವೇಶ’ ನಡೆಯಲಿದೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಮಾವೇಶದ ಪೂರ್ವಭಾವಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆ (ಐಸೆಕ್) ಮತ್ತು ರಾಷ್ಟ್ರೀಯ ಕಾನೂನು ಶಾಲೆಯ ಸಹಯೋಗದಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ವಿಚಾರ ಸಂಕಿರಣ ಹಾಗೂ ಕ್ರೈ ಸ್ ಶಿಕ್ಷಣ ಸಂ ಸ್ಥೆಗಳ ವಿದ್ಯಾರ್ಥಿ ಗಳ ವಿಜ್ಞಾನ ವಸ್ತು ಪ್ರದರ್ಶ ನ ಹಮ್ಮಿಕೊಳ್ಳಲಾಗಿದೆ. ಸಂವಿಧಾನದ ಮಹತ್ವ ಹಾಗೂ ಮೌಲ್ಯದ ಕುರಿತು ಅರಿವು ಮೂಡಿಸುವುದು ಹಾಗೂ ರಾಷ್ಟ್ರೀಯ ಏಕತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಲಾಗುತ್ತಿದೆ ಎಂದರು.
ಸಮಾವೇಶಕ್ಕೆ ಪೂರ್ವಭಾವಿಯಾಗಿ ಜನವರಿ 26 ರಿಂದ “ಸಂವಿಧಾನ ಜಾಗೃತಿ ಜಾಥಾ” ಆಯೋಜಿಸಲಾಗುವುದು. ಈ ಜಾಥಾವು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಸಂವಿಧಾನದ ಮಹತ್ವ, ರಾಷ್ಟ್ರೀಯ ಭಾವೈಕ್ಯತೆ ಕುರಿತಂತೆ ಅರಿವು ಮೂಡಿಸುವ ಕಿರುಚಿತ್ರಗಳು, ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲಾಗುವುದು
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ಸಮಾರಂಭದಲ್ಲಿ ಒಂದು ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ವಿವಿಧ ವಿಷಯಗಳ ಕುರಿತ ಪರಿಣತರ ಚರ್ಚೆಯನ್ನು ಆಧರಿಸಿ, ನಿರ್ಣಯಗಳನ್ನು ಕೈಗೊಳ್ಳಲಾಗುವುದು
ಇಂದಿನ ಸಮಾಜ ಎದುರಿಸುತ್ತಿರುವ ಎಲ್ಲ ಸಮಸ್ಯೆ, ಸವಾಲುಗಳಿಗೆ ಸಂವಿಧಾನದಲ್ಲಿ ಉತ್ತರವಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಿದೆ
ಸಮಾವೇಶದಲ್ಲಿ ಅತ್ಯುತ್ತಮ ಸಂಪನ್ಮೂಲ ವ್ಯಕ್ತಿಗಳು ಹಾಗೂ ಅತಿಥಿಗಳನ್ನು ಆಹ್ವಾನಿಸಿ, ಅತ್ಯುತ್ತಮ ಚರ್ಚಾಗೋಷ್ಠಿಗಳನ್ನು ಆಯೋಜಿಸುವಂತೆ ಸೂಚಿಸಲಾಯಿತು.