ಬೆಂಗಳೂರು, ಜ 12(DaijiworldNews/AK):ಇದೀಗ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ವಿಚಾರ ರಾಜಕೀಯ ಸ್ವರೂಪ ಪಡೆದುಕೊಳ್ಳುವ ಮೂಲಕ ಬಿಜೆಪಿ- ಕಾಂಗ್ರೆಸ್ ನಡುವಿನ ತಿಕ್ಕಾಟಕ್ಕೆ ಕಾರಣವಾಗಿದೆ.
ರಾಮಂದಿರ ಉದ್ಘಾಟನೆಯ ಆಹ್ವಾನ ತಿರಸ್ಕರಿಸಿರುವ ಕಾಂಗ್ರೆಸ್ ಹೈಕಮಾಂಡ್, ಸಿಎಂ ನೀಡಿದ ಹೇಳಿಕೆ ಬಿಜೆಪಿಯ ಆಕ್ರೊಶಕ್ಕೆ ಗುರಿಯಾಗಿದೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಕುರಿತು , ಹಿಂದೂಗಳ ಭಾವನೆಗೆ ಕಾಂಗ್ರೆಸ್ ಧಕ್ಕೆ ತಂದಿರುವುದು ಅಕ್ಷಮ್ಯ ಅಪರಾಧ. ಒಳ್ಳೆಯ ಕೆಲಸಕ್ಕೆ ಕಲ್ಲು ಹಾಕಿದ ಕಾಂಗ್ರೆಸಿಗರು ಮುಂದೆ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಬಿಜೆಪಿಯವರು ಅಯೋಧ್ಯೆಗೆ ಏಕೆ ಹೋಗಬೇಕು ಎಂದು ಪ್ರಶ್ನಿಸುವ ಮೂಲಕ ಸಿಎಂ ಸಿದ್ದರಾಮಯ್ಯನವರು ಚಿಲ್ಲರೆ ರಾಜಕಾರಣ ಮಾಡಿ ಪ್ರಚಾರ ತೆಗೆದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.