ಬೆಂಗಳೂರು, ಜ 14(DaijiworldNews/SK): ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ಜನರ ಜೀವನನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇವೆ ಎಂದು ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಆದರೆ ಯೋಜನೆಗಳ ಹಣ ಜನರಿಗೆ ಸಕಾಲಕ್ಕೆ ತಲುಪುತ್ತಿದೆಯೇ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ಧಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಅವರು, ವೃದ್ದೆಯೊಬ್ಬರು ಮಾಶಾಸನಕ್ಕಾಗಿ 5 ಕಿ.ಮೀ ತೆವಳಿಕೊಂಡು ಬಂದು ಅನುಭವಿಸುವ ಯಾತನೆ ನಾಮ್ಮೆಲ್ಲರನ್ನು ತಲೆಗಗ್ಗಿಸುವಂತೆ ಮಾಡಿದೆ. ಇಷ್ಟು ಮಾತ್ರವಲ್ಲದೇ ಸಮಾಜದಲ್ಲಿ ಇನ್ನು ಬಹುತೇಕ ಜನರು ಒಂದು ತುತ್ತಿನ ಆಹಾರಕ್ಕೂ ಪರಾದಡುವ ಸ್ಥಿತಿ ನಿರ್ಮಾಣವಾಗಿದೆ.ಇದ್ದಕ್ಕೆ ಅಂತ್ಯಯಾಗ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ನಾನು ಮುಖ್ಯಮಂತ್ರಿ ಸ್ಥಾನದಲ್ಲಿದ್ದಾಗ ವೃದ್ಧರು, ವಿಕಲಚೇತನರು, ವಿಧವೆಯರು, ದೇವದಾಸಿಯರು ಸೇರಿ ಸಮಾಜದ ವಿವಿಧ ದುರ್ಬಲ ಜನರಿಗೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟು, ಅವರ ಆರ್ಥಿಕ ಸಬಲೀಕರಣಕ್ಕೆ ಕ್ರಮ ವಹಿಸಿದ್ದೆ. ವೃದ್ದಾಪ್ಯ ವೇತನ ವಿಕಲಚೇತನರ ಮಾಶಾಸನವನ್ನು ಏರಿಕೆ ಮಾಡಿದ್ದೆ’ ಎಂದು ತಿಳಿಸಿದ್ದಾರೆ.
ಇನ್ನು ಗೃಹಲಕ್ಷಿಯರಿಗೆ ೨ ಸಾವಿರ ರೂ. ನೀಡುತ್ತಿರಿ ಸರಿ, ಆದರೆ ಇಂತಹ ಅಸಂಖ್ಯಾತ ವೃದ್ಧ ಅಮ್ಮಂದಿರ ಪರಿಸ್ಥಿತಿ ಏನು? ಸರ್ಕಾರಕ್ಕೆ ಕನಿಕರ ಎನ್ನುವುದೇ ಇಲ್ಲವೇ? ಇನ್ನು ಮುಂದೆ ಬಡ, ಅಶಕ್ತ ಮಹಿಳೆಯರಿಗೆ ನೆರವಾಗುವ ವೃದ್ಯಾಪ್ಯ ವೇತನ, ವಿಧವಾ ವೇತನವನ್ನು ಸಕಾಲಕ್ಕೆ ಬಿಡುಗಡೆ ಮಾಡಬೇಕು. ಇದರೊಂದಿಗೆ ಮಾಶಾಸನಕ್ಕಾಗಿ ತೆವಳಿಕೊಂಡು ಬಂದ ವೃದ್ಧೆಗೆ ಅದಷ್ಟು ಬೇಗ ಸರ್ಕಾರ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.