ಹಾವೇರಿ, ಜ 15 (DaijiworldNews/HR): ಹಾನಗಲ್ ಗ್ಯಾಂಗ್ರೇಪ್ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹಾವೇರಿಗೆ ಆಗಮಿಸಿದ ಸಿದ್ದರಾಮಯ್ಯ ಹಾನಗಲ್ ಗ್ಯಾಂಗರೇಪ್ ಪ್ರಕರಣದ ಸಂತ್ರಸ್ತೆಯನ್ನೂ ಭೇಟಿ ಮಾಡಿ ಸಮಸ್ಯೆಗಳನ್ನ ಆಲಿಸಿ ಬಳಿಕ ಪೊಲೀಸರಿಂದ ತನಿಖೆ ಬೆಳವಣಿಗೆ ಮಾಹಿತಿ ಪಡೆದರು.
ಈ ಕುರಿತು ಮಾತನಾಡಿದ ಅವರು, ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲ ಆರೋಪಿಗಳನ್ನೂ ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ, ಯಾರನ್ನೂ ಕಾನೂನು ಕೈಗೆ ತೆಗೆದುಕೊಳ್ಳೋದಕ್ಕೆ ಬಿಡೋದಿಲ್ಲ. ಈ ಕೇಸ್ನಲ್ಲಿ ಯಾರೇ ಕಾನೂನು ಕೈಗೆ ತೆಗೆದುಕೊಂಡಿದ್ದರೂ ಶಿಕ್ಷೆ ಕೊಡಿಸ್ತೇವೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದರು.
ಇನ್ನು ಪ್ರಾಥಮಿಕ ವರದಿ ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುತ್ತದೆ. ಯಾವುದನ್ನೂ ಮುಚ್ಚಿ ಹಾಕೋ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.