ಅಯೋಧ್ಯೆ,ಜ 18 (DaijiworldNews/PC): ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ಸಂದರ್ಭದಲ್ಲಿ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.
ಸಾರ್ವಜನಿಕ ಭಾವನೆಗೆ ಮನ್ನಣೆ ನೀಡಿ ಅರ್ಧ ದಿನ ರಜೆ ನೀಡಲು ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಮಹತ್ವದ ಸಮಾರಂಭದಲ್ಲಿ ಭಾಗವಹಿಸಲು ಅಥವಾ ವೀಕ್ಷಿಸಲು ಅಧಿಕಾರಿಗಳಿಗೆ ಅವಕಾಶ ನೀಡುವ ಉದ್ದೇಶದಿಂದ ರಜೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.