ಬೆಂಗಳೂರು, ಜ 20 (DaijiworldNews/HR): ನಟ ದರ್ಶನ್ ಮನೆಯ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಆರ್.ನಗರ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ 150ಕ್ಕೂ ಹೆಚ್ಚು ಪುಟಗಳ ಚಾರ್ಜ್ ಶೀಟ್ ಅನ್ನು ಆರ್.ಆರ್.ನಗರ ಪೊಲೀಸರು ಸಿಟಿ ಸಿವಿಲ್ ಕೋರ್ಟ್ ಗೆ ಸಲ್ಲಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐದಕ್ಕೂ ಹೆಚ್ಚು ಮಂದಿಯನ್ನ ಸಾಕ್ಷಿಗಳಾಗಿ ಪೊಲೀಸರು ಪರಿಗಣಿಸಿದ್ದು, ನಟ ದರ್ಶನ್ ಅವರನ್ನೂ ಸಾಕ್ಷಿಯಾಗಿ ಹೇಳಿಕೆ ದಾಖಲಿಸಿದ್ದರು.
ಇದೀಗ ಚಾರ್ಜ್ ಶೀಟ್ ನಲ್ಲಿ ನಟ ದರ್ಶನ್ ಹೆಸರು ಕೈಬಿಟ್ಟಿದ್ದು, ಘಟನೆಗೂ ದರ್ಶನ್ ಗೂ ಯಾವುದೇ ಸಂಬಂಧ ಇಲ್ಲವೆಂದು ಉಲ್ಲೇಖ ಮಾಡಿದ್ದಾರೆ.