ನವದೆಹಲಿ,ಜ 25 (DaijiworldNews/PC): ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಆದ್ದರಿಂದ ನಾನು ನನ್ನ ಸ್ವ ಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದೇನೆ ಇಲ್ಲಿಯವರೆಗೆ ತಾವು ನೀಡಿದ ಸಹಕಾರಕ್ಕಾಗಿ ವಂದನೆಗಳು ಎಂದು ಕಾಂಗ್ರೆಸ್ ಪಕ್ಷದಿಂದ ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿ ಮಾಧ್ಯಮದವರೊಂದಿಗೆ ಮಾತನಡಿದ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಸಂದರ್ಭದಲ್ಲಿ ನನ್ನನ್ನು ಕೂಡ ಒಳ್ಳೆಯ ರೀತಿಯಲ್ಲಿ ಗೌರವ ರೀತಿಯಲ್ಲಿ ನಡೆಸಿಕೊಂಡು ಉತ್ತಮ ಸ್ಥಾನ-ಮಾನವನ್ನು ಕೊಟ್ಟಿದ್ದಾರೆ ಅದಕ್ಕಾಗಿ ಡಿ.ಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶೆಟ್ಟರ್ ಧನ್ಯವಾದಗಳನ್ನು ತಿಳಿಸಿದ್ದಾರೆ.
ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಈ ದೇಶದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಆಗಿವೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಕಳೆದ ಒಂದು ವರ್ಷದಲ್ಲಿ ಸಾಕಷ್ಟು ಬೆಳವಣಿಗೆಗಳಾಗಿವೆ. ಬಿಜೆಪಿ ನಾಯಕರು ನನ್ನ ಜೊತೆ ಸತತ ಸಂಪರ್ಕದಲ್ಲಿದ್ದರು. ನೀವು ಬಿಜೆಪಿಗೆ ಮತ್ತೆ ಬನ್ನಿ, ಪಕ್ಷದ ಬಲ ಹೆಚ್ಚುತ್ತದೆ, ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎನ್ನುತ್ತಿದ್ದರು. ಅವರ ಕೈ ಬಲಪಡಿಸಬೇಕು, ಬಿಜೆಪಿಯ ಶಕ್ತಿ ಮತ್ತಷ್ಟು ಹೆಚ್ಚಬೇಕು ಆದ್ದರಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಎಂದರು.
ಇನ್ನು ಜಗದೀಶ್ ಶೆಟ್ಟರ್ ಅವರು ಸದ್ಯ ಬಿಜೆಪಿ ಸೇರ್ಪಡೆಯ ಘೋಷಣೆಯ ಜೊತೆಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಮತ್ತು ಎಂಎಲ್ಸಿ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.