ಹಾವೇರಿ, ಜ 28 (DaijiworldNews/HR): ಮಂಡ್ಯದಲ್ಲಿ ಹನುಮ ಧ್ವಜ ಕಿತ್ತು ಹಾಕಿರುವ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದ್ದು, ಕಾನೂನು ಬಾಹಿರ ಚಟುವಟಿಕೆ ಮಾಡುವವರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮಂಡ್ಯದಲ್ಲಿ ಹನುಮ ಧ್ವಜ ಹಾರಿಸಿರುವುದನ್ನು ಪೊಲಿಸ್ ಅಧಿಕಾರಿಗಳ ಮೂಲಕ ಕಿತ್ತು ಹಾಕಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ ಅಂತ ಪದೇ ಪದೇ ಹೇಳುತ್ತಾರೆ. ಆದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದರು.
ಇನ್ನು ರಾಮ ಮಂದಿರ ಲೋಕಾರ್ಪಣೆ ಸಂದರ್ಭದಲ್ಲಿಯೂ ರಾಜ್ಯದಲ್ಲಿ ಹಲವು ಕಡೆ ಅಡೆ ತಡೆಗಳು ಆಗಿದ್ದು, ಕೆಲವು ಜನರನ್ನು ಅರೆಸ್ಟ್ ಮಾಡಿದ್ದಾರೆ. ಎಲ್ಲಾ ಕಡೆ ಸಮಸ್ಯೆ ಆಗುತ್ತಿದೆ. ಸರ್ಕಾರದ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಹೇಳಿದ್ದಾರೆ.