ಕಲಬುರಗಿ,ಜ 30 (DaijiworldNews/ AK): ಕುಡಿಯುವ ನೀರಿನ ಬಾವಿಗೆ ಬಿದ್ದು ಅಣ್ಣ ತಂಗಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಟಪಳ್ಳಿ ಗ್ರಾಮದಲ್ಲಿ ಜ.29ರ ಸೋಮವಾರ ನಡೆದಿದೆ.
ಮೃತಪಟ್ಟ ಅಣ್ಣ ತಂಗಿ ಸಂದೀಪ (21), ನಂದಿನಿ (18) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಚಿಂಚೋಳಿ ಪೋಲಿಸ್ ಸಬ್ ಇನ್ಸಪೆಕ್ಟರ್ ಹಣಮಂತ ಬಂಕಲಗಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.