ಬೆಂಗಳೂರು, ಜ 30(DaijiworldNews/AA): ಹನುಮ ಧ್ವಜ ತೆರವು ವಿಚಾರವಾಗಿ ಸರ್ಕಾರವೇ ನಕಲಿ ದಾಖಲೆ ಸೃಷ್ಟಿ ಮಾಡಿಕೊಂಡು ಆರೋಪ ಮಾಡುತ್ತಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಕೆರಗೋಡು ಘಟನೆಗೆ ಸಂಬಂಧಿಸಿದಂತೆ ಸಚಿವ ಎನ್ ಚಲುವರಾಯಸ್ವಾಮಿ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕೆರಗೋಡಿನ ಬಸ್ ನಿಲ್ದಾಣದ ಧ್ವಜಸ್ತಂಭ ಸ್ಥಾಪನೆಗೆ ಮನವಿ ಮಾಡಿಕೊಂಡಿದ್ದ ಗೌರಿ ಶಂಕರ್ ಸೇವಾ ಟ್ರಸ್ಟ್, ಯಾವ ಧ್ವಜವೆಂದು ತಿಳಿಸಿರಲಿಲ್ಲ. ಅದಕ್ಕೆ ಅನುಮತಿ ನೀಡಲಾಗಿತ್ತು. ಇದೀಗ ಸರ್ಕಾರವೇ ನಕಲಿ ದಾಖಲೆ ಸೃಷ್ಟಿಸಿದೆ ಎಂದು ತಿರುಗೇಟು ನೀಡಿದ್ದಾರೆ.
ಗೌರಿ ಶಂಕರ್ ಸೇವಾ ಟ್ರಸ್ಟ್ ಗೆ ನವೆಂಬರ್ ನಲ್ಲಿ ಅನುಮತಿ ನೀಡಲಾಗಿದ್ದು, ಇಂತದ್ದೇ ಧ್ವಜವೆಂದು ಎಲ್ಲಿಯೂ ಉಲ್ಲೇಖ ಮಾಡಿರಲಿಲ್ಲ. 2023ರ ಡಿ. 29ರಂದು ಮತ್ತೆ ಹೊಸ ಅರ್ಜಿಯನ್ನು ಪಡೆದಿದ್ದಾರೆ. ಅದನ್ನು ತಿದ್ದಿಕೊಂಡಿದ್ದಾರೆ. ಈ ಅರ್ಜಿಯಲ್ಲಿ ತ್ರಿವರ್ಣ ಧ್ವಜ, ಕನ್ನಡ ಧ್ವಜ ಹಾರಿಸಲು ಅನುಮತಿ ನೀಡಿದ್ದೇವೆ ಎಂದಿದೆ. ಜನವರಿಯಲ್ಲಿ ಪತ್ರ ಸೃಷ್ಟಿಸಲಾಗಿದೆ. ಮುಚ್ಚಳಿಕೆಯಲ್ಲಿರುವ ಹೆಸರು, ಅರ್ಜಿಗಳಲ್ಲಿ ಬೇರೆ ಹೆಸರುಗಳಿವೆ ಎಂದು ಹೆಚ್ ಡಿಕೆ ತಿಳಿಸಿದ್ದಾರೆ.