ರಾಯ್ಗಂಜ್, ಜ 30 (DaijiworldNews/HR): ನಾನು ಬದುಕಿರುವವರೆಗೂ ಪಶ್ಚಿಮ ಬಂಗಾಳದಲ್ಲಿ ಸಿಎಎ ಜಾರಿಗೆ ತರಲು ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶಪಥ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮುಂಬರುವ ಚುನಾವಣೆಗೆ ಮುನ್ನ ಬಿಜೆಪಿಯು ಪೌರತ್ವ (ತಿದ್ದುಪಡಿ) ಕಾಯ್ದೆ ಅಥವಾ ಸಿಎಎ ವಿಷಯವನ್ನು “ಅವಕಾಶವಾದಿಯಾಗಿ ಎತ್ತಿದೆ” ಎಂದರು.
ಇನ್ನು ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಶಾಂತನು ಠಾಕೂರ್ ಅವರು ಸಿಎಎಯನ್ನು ಒಂದು ವಾರದೊಳಗೆ ದೇಶಾದ್ಯಂತ ಜಾರಿಗೆ ತರಲಾಗುವುದು ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮಮತಾ, ನಾನು ಬದುಕಿರುವವರೆಗೂ ಪಶ್ಚಿಮ ಬಂಗಾಳದಲ್ಲಿ ಸಿಎಎ ಜಾರಿಗೆ ತರಲು ಎಂದಿಗೂ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.