ಬೆಂಗಳೂರು , ಫೆ 01 (DaijiworldNews/PC): ಕನ್ನಡಿಗ ನ್ಯಾ. ಪಿ.ಎಸ್.ದಿನೇಶ್ ಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ನ್ಯಾ.ದಿನೇಶ್ ಕುಮಾರ್ ಅವರು 2015ರಿಂದ ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿಯಾಗಿ ಸೇವೆಸಲ್ಲಿಸಿದ್ದರು. ನ್ಯಾ. ದಿನೇಶ್ ಕುಮಾರ್ ಅವರು ನ್ಯಾಯಾಂಗ ಮತ್ತು ಆಡಳಿತಾತ್ಮಕ ಭಾಗದಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ.
ನ್ಯಾ.ದಿನೇಶ್ ಕುಮಾರ್ ಅವರು "ಕರ್ನಾಟಕ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಇದೇ ಫೆ.24ರಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ. ಮುಖ್ಯ ನ್ಯಾಯಮೂರ್ತಿಯಾಗಿ ಒಂದು ತಿಂಗಳಿಗಿಂತ ಸ್ವಲ್ಪ ಹೆಚ್ಚು ಅಧಿಕಾರಾವಧಿಯನ್ನು ಹೊಂದಿರುತ್ತಾರೆ. ಅವರು ಉತ್ಕೃಷ್ಟ ಸಮಗ್ರತೆ, ಪ್ರಾಮಾಣಿಕತೆ ಮತ್ತು ಸಾಮರ್ಥ್ಯಗಳಿಂದ ಗಮನಸೆಳೆದವರಾಗಿದ್ದಾರೆ. ನೇಮಕವಾದಾಗಿನಿಂದ ಕರ್ನಾಟಕ ಹೈಕೋರ್ಟ್ ನಲ್ಲಿ ನ್ಯಾ. ದಿನೇಶ್ ಕುಮಾರ್ ಮಹತ್ತರ ಸೇವೆ ಸಲ್ಲಿಸಿದ್ದಾರೆ” ಎಂದು ಸುಪ್ರೀಂ ಕೋರ್ಟ್ ಕೊಲಿಜಿಯಂನ ನಿರ್ಣಯದಲ್ಲಿ ತಿಳಿಸಲಾಗಿದೆ.