ನವದೆಹಲಿ,ಫೆ 01 (DaijiworldNews/MS): ಸಾರ್ವತ್ರಿಕ ಚುನಾವಣೆಗೆ ಮುನ್ನ ಕೇಂದ್ರದಲ್ಲಿನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರ ತನ್ನ 2ನೇ ಅವಧಿಯ ಕೊನೆಯ ಬಜೆಟ್ ಹಾಗೂ ಮಧ್ಯಂತರ ಬಜೆಟ್ ಅನ್ನು ಫೆ. 1ರ ಗುರುವಾರ ಲೋಕಸಭೆಯಲ್ಲಿ ಮಂಡಿಸಲಿದೆ.
ಲೋಕಸಭೆ ಚುನಾವಣೆಯ ನಂತರ ಸರ್ಕಾರ ರಚನೆಯಾಗುವವರೆಗೆ ಮಧ್ಯಂತರ ಬಜೆಟ್ ಮಧ್ಯಂತರ ಅವಧಿಯ ಹಣಕಾಸಿನ ಅಗತ್ಯಗಳನ್ನು ನೋಡಿಕೊಳ್ಳುತ್ತದೆ. ಹೊಸ ಸರ್ಕಾರದಿಂದ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುವುದು.
ಈ ಬಾರಿಯ ಬಜೆಟ್ ರೈತರು ಮತ್ತು ಮಹಿಳೆಯರಿಗೆ ಹೆಚ್ಚಿನ ಕೊಡುಗೆಯುಳ್ಳ ಮಿಶ್ರಣವನ್ನು ಒಳಗೊಂಡಿರುವ ಸಾಧ್ಯತೆಯಿದೆ.
ಮಧ್ಯಂ ತರ ಬಜೆಟ್ ನಲ್ಲಿ ಯಾವುದೇ ಹೊಸ ಘೋಷಣೆಗಳನ್ನು ಪ್ರಕಟಿಸುವುದಿಲ್ಲ ಹಾಗಾಗಿ, ಹಳೆಯ ಹಾಗೂ ಹೊಸ ತೆರಿಗೆ ಪದ್ಧತಿಯಡಿ ತೆರಿಗೆದಾರರಿಗೆ ಯಾವುದೇ ವಿನಾಯಿತಿ ಪ್ರಟಿಸುವ ಸಾಧ್ಯತೆ ಇಲ್ಲ ಎಂದು ಮೂಲಗಳು ತಿಳಿಸಿವೆ.