ಹಾವೇರಿ, ಫೆ 01 (DaijiworldNews/SK): ರಾಜ್ಯ ಸರ್ಕಾರದ ಗ್ಯಾರಂಟಿಗಳು ಎಲ್ಲ ಜನರಿಗೂ ತಲುಪುತ್ತಿಲ್ಲ. ಗ್ಯಾರಂಟಿ ಸೌಲಭ್ಯ ಸಿಗದ ಜನರು ಕಾಂಗ್ರೆಸ್ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಈ ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್ ಗೆ ಮುಳುವಾಗಲಿದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹಾವೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲಲಿದೆ. ತದನಂತರ ರಾಜ್ಯ ಸರ್ಕಾರ ಬಿದ್ದು ಹೋಗಲಿದೆ.
ಈಗಾಗಲೇ ಕಾಂಗ್ರೆಸ್ ಸಚಿವರೂ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಧೈರ್ಯ ತೋರುತ್ತಿಲ್ಲ. ಮತ್ತೊಂದು ಕಡೆ ‘ಇಂಡಿಯಾ’ ಒಕ್ಕೂಟ ಕೂಡ ಮುರಿದು ಬೀಳುತ್ತಿದೆ. ಇನ್ನು ದೇಶದ ಸರ್ವಾಂಗೀಣ ವಿಕಾಸಕ್ಕಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರದ ಚುಕ್ಕಾಣಿ ಪಡೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.