ಬೆಂಗಳೂರು, ಫೆ 02 (DaijiworldNews/HR): ಸಂಸದ ಡಿ.ಕೆ ಸುರೇಶ್ ಅವರು ಜನರ ಅಭಿಪ್ರಾಯ ಹೇಳಿದ್ದಾರೆ ಅಷ್ಟೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸಂಸದ ಡಿ.ಕೆ.ಸುರೇಶ್ ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆ ಬಗ್ಗೆ ಮಾತನಾಡಿದ ಡಿಕೆಶಿ, ಜನ ಆ ರೀತಿ ಯೋಚನೆ ಮಾಡುತ್ತಿದ್ದಾರೆ. ನಮ್ಮನ್ನು ಕಡೆಗಣನೆ ಮಾಡುತ್ತಿದ್ದಾರೆ ಎಂದು ಸುರೇಶ್ ಹೇಳಿದ್ದಾರೆ ಎಂದು ಸಹೋದರನನ್ನು ಸಮರ್ಥಿಸಿಕೊಂಡಿದ್ದಾರೆ.
ಇನ್ನು ನಾನು ಭಾರತದವನು, ಒಂದೇ ಭಾರತ. ನಮಗೆ ಅನ್ಯಾಯ ಆಗಿದೆ ಎಂದು ಜನರ ಭಾವನೆಯನ್ನು ಡಿಕೆ ಸುರೇಶ್ ತಿಳಿಸಿದ್ದಾರೆ. ಭಾರತ ಒಗ್ಗಟ್ಟು ಇರಬೇಕು, ನಾವೆಲ್ಲ ಭೂತಾಯಿ ಮಕ್ಕಳು. ಕಾಶ್ಮೀರದಿಂದ ಕನ್ಯಾಕುಮಾರಿಯವರಗೆ ಒಂದೇ. ಹಿಂದಿ ಬೆಲ್ಟ್ ಸೇರಿದಂತೆ ಯಾರಿಗೂ ಅನ್ಯಾಯ ಆಗಬಾರದು ಎಂದು ಹೇಳಿದ್ದಾರೆ.