ನವದೆಹಲಿ, ಎ25(Daijiworld News/SS): ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಜತೆಗೆ ಮೈತ್ರಿಗಾಗಿ ಕೊನೆಯ ಕ್ಷಣದವರೆಗೂ ಕಾಂಗ್ರೆಸ್ ಸಿದ್ಧವಿದೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಆಪ್ ಜತೆಗೆ ಕಾಂಗ್ರೆಸ್ನದು ಮೈತ್ರಿ ನಾಟಕ ಎಂದು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಟೀಕಿಸಿದ್ದರು. ಈ ಬೆನ್ನಲ್ಲೇ ರಾಹುಲ್ ಗಾಂಧಿ ಈ ಪ್ರತಿಕ್ರಿಯೆ ನೀಡಿದ್ದು, ಹರಿಯಾಣದಲ್ಲೂ ಮೈತ್ರಿಗೆ ಮುಂದಾಗಬೇಕೆಂಬ ಷರತ್ತನ್ನು ಆಪ್ ಕೈಬಿಟ್ಟರೆ ಕೊನೆಯ ಕ್ಷಣದವರೆಗೂ ಕಾಂಗ್ರೆಸ್ ಮೈತ್ರಿಗೆ ಸಿದ್ಧವಿದೆ ಎಂದು ತಿಳಿಸಿದರು.
ದೇಶದಲ್ಲಿ 2019ರ ಲೋಕಸಭಾ ಚುನಾವಣೆಯು ಏಳು ಹಂತಗಳಲ್ಲಿ ನಡೆಯುತ್ತಿದ್ದು, ಮೇ 23ಕ್ಕೆ ಫಲಿತಾಂಶ ಹೊರಬೀಳಲಿದೆ.