ಬೆಂಗಳೂರು, ಫೆ 02 (DaijiworldNews/AA): “ಜನರ ಭಾವನೆಗಳನ್ನು ಹೇಳಿದ್ದೇನೆಯೇ ಹೊರತು ಬೇರೇನೂ ಹೇಳಿಲ್ಲ” ಎಂದು ಡಿ.ಕೆ. ಸುರೇಶ್ ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ಅನ್ಯಾಯ ಆಗುತ್ತಿದೆ. ಕನ್ನಡ ಧ್ವಜಕ್ಕೆ ಸ್ಥಾನಮಾನ ನೀಡುವಂತೆ ಕೋರಿ ಕೇಂದ್ರಕ್ಕೆ ಪತ್ರ ಬರೆದಿದ್ದರೂ ಇದುವರೆಗೂ ಉತ್ತರ ಬಂದಿಲ್ಲ. ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ನೀಡಿದ್ದರೂ ಬೇರೆ ಭಾಷೆಗಳಿಗೆ ಕೊಟ್ಟ ಹಣ ನಮಗೆ ನೀಡಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ನೀರಿನ ಸಮಸ್ಯೆ ಉಂಟಾದಾಗ ಕೇಂದ್ರ ಯಾವುದೇ ನಿಲುವು ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ. ಹಲವಾರು ನೀರಾವರಿ ಯೋಜನೆಗಳು ಬಾಕಿ ಇವೆ. ಬಿಜೆಪಿಯವರು ಈ ಎಲ್ಲಾ ವಿಷಯಗಳ ಕುರಿತು ಮಾತನಾಡುವ ಬದಲು ಜನರ ಗಮನವನ್ನು ಬೇರೆಡೆ ಸೆಳೆಯುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.