ಚಿತ್ರದುರ್ಗ, ಫೆ 03 (DaijiworldNews/PC): ಜಾತಿ ಕಾರಣಕ್ಕೆ ಬಾಗೂರು ಗ್ರಾಮದ ಚನ್ನಕೇಶವ ದೇವಸ್ಥಾನದ ಗರ್ಭಗುಡಿಗೆ ಬಿಡಲಿಲ್ಲ ಎಂದು ಕನಕ ಪೀಠದ ಈಶ್ವರಾನಂದಪುರಿ ಸ್ವಾಮೀಜಿ ತಮ್ಮ ನೋವನ್ನು ತೋಡಿಕೊಂಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾಗೂರು ಗ್ರಾಮದ ಚನ್ನಕೇಶವ ದೇವಸ್ಥಾನದ ಗರ್ಭಗುಡಿಗೆ ಬಿಡಲಿಲ್ಲ ಹಾಗೂ ನಾವು ದೇವಸ್ಥಾನಕ್ಕೆ ಹೋಗಿದ್ದೆವೆಂಬ ಕಾರಣಕ್ಕೆ ಸ್ವಚ್ಛಗೊಳಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ವೈಕುಂಠ ಏಕಾದಶಿಗೆ ಹೋದಾಗ ನರಕ ತೋರಿಸಿಬಿಟ್ಟರು. ಅಲ್ಲಿನ ಪೂಜಾರಿ ಹೆಣ್ಣು ಮಕ್ಕಳಿಗೆಲ್ಲಾ ಗರ್ಭಗುಡಿಗೆ ಬಿಟ್ಟಿದ್ದರು, ಆದರೆ ಮಠಾಧೀಶರಾದ ನಮ್ಮನ್ನು ಗರ್ಭಗುಡಿಯ ಹೊರಗೇ ನಿಲ್ಲಿಸಿದ್ದರು ಎಂದು ನೋವನ್ನು ವ್ಯಕ್ತಪಡಿಸಿದರು.
ನನಗೆ ಅದು ಮುಜರಾಯಿ ದೇಗುಲ ಎಂದು ಗೊತ್ತಿದ್ದರೆ ಉಡುಪಿಯಲ್ಲಿ ಕನಕದಾಸರು ಪ್ರತಿಭಟಿಸಿದಂತೆ ಅಂದೇ ಪ್ರತಿಭಟಿಸುತ್ತಿದ್ದೆವು. ಆಗ ನಮಗೆ ಮುಜರಾಯಿ ದೇಗುಲ ಎಂಬುದು ತಿಳಿದಿರಲಿಲ್ಲ ಎಂದು ತಿಳಿಸಿದರು.