ಮುಂಬಯಿ, 03 (DaijiworldNews/ AK): ಮಹಾರಾಷ್ಟ್ರದ ಉಲ್ಲಾಸನಗರದಲ್ಲಿ ಶಿವಸೇನೆ ಮುಖಂಡ ಮಹೇಶ್ ಗಾಯಕ್ವಾಡ್ ಮೇಲೆ ಬಿಜೆಪಿ ಶಾಸಕ ಗಣೇಶ್
ಗಾಯಕ್ವಾಡ್ ಗುಂಡು ಹಾರಿಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಇಬ್ಬರ ನಡುವೆ ಗಲಾಟೆ ನಡೆದಿದ್ದೆ. ಬಳಿಕ ಇಬ್ಬರು ರಾಜಕಾರಣಿಗಳು ದೂರು ನೀಡಲು ಹಿಲ್ ಲೈನ್ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಈ ವೇಳೆ ಬೆಂಬಲಿಗರೊಂದಿಗೆ ರಾಜಕಾರಣಿಗಳು ರಾಣೆಯಲ್ಲಿ ಸೇರಿದ್ದರು ಈ ನಡುವೆ ಎರಡು ಕಡೆಯವರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ
ಗಣೇಶ್ ಗಾಯಕ್ವಾಡ್ ಅವರು ಮಹೇಶ್ ಗಾಯಕ್ವಾಡ್ ಮೇಲೆ ನಾಲ್ಕು ಸುತ್ತಿನ ಗುಂಡುಗಳನ್ನು ಹಾರಿಸಿದ್ದಾರೆ .ಅಲ್ಲದೆ ಘಟನೆಯಲ್ಲಿ ಶಿವಸೇನೆ ಶಾಸಕ ರಾಹುಲ್ ಪಾಟೀಲ್ ಕೂಡ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಗಾಯಗೊಂಡ ಇಬ್ಬರನ್ನು ಥಾಣೆಯ ಜುಪಿಟರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಗುಂಡು ಹಾರಿಸಿದ ಗಣೇಶ್ ಗಾಯಕ್ವಾಡ್ ಅವರನ್ನು ಪೊಲೀಸರು ಬಂಧಿಸಿ ಗನ್ ನನ್ನು ವಶಕ್ಕೆ ಪಡೆದಿದ್ದಾರೆ .
ಗಾಯಗೊಂಡ ಮಹೇಶ್ ಗಾಯಕ್ವಾಡ್ ಅವರನ್ನು ಮೊದಲು ಉಲ್ಲಾಸನಗರದ ಮೀರಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ,ಅವರ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ರಾತ್ರಿ 11 ಗಂಟೆಗೆ ಥಾಣೆಯ ಜುಪಿಟರ್ ಆಸ್ಪತ್ರೆಗೆಸ್ಥಳಾಂತರಿಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.