ಶ್ರೀನಗರ, ಎ25(Daijiworld News/SS): ನಸುಕಿನ ವೇಳೆ ಸೇನಾ ಪಡೆಗಳು ದಕ್ಷಿಣ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಬಿಜ್ಬೆಹರಾದಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆಗೈದಿವೆ.
ಸೇನಾ ಪಡೆಗಳು ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯಚರಣೆಗಿಳಿದಿದ್ದು ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಸಿ ಇಬ್ಬರನ್ನು ಹತ್ಯೆಗೈದಿದ್ದಾರೆ.
ದಕ್ಷಿಣ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಬಿಜ್ಬೆಹರಾದಲ್ಲಿ ಕೆಲ ಉಗ್ರರು ಅಡಗಿರುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಹುಡುಕಾಟ ಮುಂದುವರಿದಿದೆ. ದಾಳಿ ನಡೆದ ಸ್ಥಳದಲ್ಲಿ ಉಗ್ರರ ಬಳಿಯಿಂದ ಶಸ್ತ್ರಾಸ್ತ್ರಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಹತ್ಯೆಗೀಡಾದ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂಬುವುದು ಇನ್ನಷ್ಟೇ ತಿಳಿದು ಬರಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.