ಬೆಂಗಳೂರು, ಫೆ,4 (DaijiworldNews/AK):ಹಿಂದೂʼ ಪದದ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿರುವ ಆರೋಪದಡಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ವಿಚಾರಣೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ ಹೊರಡಿಸಿದೆ.
ಸತೀಶ್ ಜಾರಕಿಹೊಳಿ ಹೇಳಿಕೆ ವಿರುದ್ಧ ವಕೀಲ ದಿಲೀಪ್ ಕುಮಾರ್ ಎಂಬುವವರು ನೀಡಿದ್ದ ಖಾಸಗಿ ದೂರಿನ ಪ್ರಕರಣ ಕುರಿತು ಶನಿವಾರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಚಿವ ಜಾರಕಿಹೊಳಿ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶಿಸಿದೆ.
2022ರ ನ. 6ರಂದು ಬೆಳಗಾವಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಸತೀಶ್ ಜಾರಕಿಹೊಳಿ ಹಿಂದು ಎಂಬ ಪದ ಆಶ್ಲೀಲ, ಕೊಳಕು ಎಂಬ ಅರ್ಥ ನೀಡುತ್ತದೆ.
ಹಿಂದುತ್ವ ಎಂಬುದು ಪರ್ಷಿಯನ್ ರಲ್ಲಿ ಸತೀಶ್ ಜಾರಕಿಹೊಳಿ ಹಿಂದು ಎಂಬ ಪದ ಆಶ್ಲೀಲ, ಕೊಳಕು ಎಂಬ ಅರ್ಥ ನೀಡುತ್ತದೆ. ಈ ಸಂಬಂಧ ದೂರು ದಾಖಲಾಗಿತ್ತು.