ನವದೆಹಲಿ, ಫೆ 04 (DaijiworldNews/HR): ಬಿಜೆಪಿಯು ನನ್ನನ್ನು ಅವರ ಪಕ್ಷಕ್ಕೆ ಸೇರಿಸಿಕೊಳ್ಳಲು ಬಯಸುತ್ತಿದೆ. ಆದರೆ ನಾವು ತಲೆಬಾಗುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಿಜೆಪಿಯವರು ನನ್ನನ್ನು ಜೈಲಿಗೆ ಕಳುಹಿಸಿದರೂ ಶಾಲೆಗಳನ್ನು ನಿರ್ಮಿಸುವುದು ಮತ್ತು ಜನರಿಗೆ ಉಚಿತ ಚಿಕಿತ್ಸೆ ನೀಡುವಂತಹ ದೆಹಲಿ ಸರಕಾರದಿಂದ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ನಿಲ್ಲುವುದಿಲ್ಲ ಎಂದರು.
ಇನ್ನು ಮನೀಷ್ ಸಿಸೋಡಿಯಾ ಅವರು ಶಾಲೆಗಳನ್ನು ನಿರ್ಮಿಸಿದ್ದರಿಂದ ಅವರನ್ನು ಜೈಲಿಗೆ ತಳ್ಳಲಾಯಿತು. ಮೊಹಲ್ಲಾ ಚಿಕಿತ್ಸಾಲಯಗಳನ್ನು ನಿರ್ಮಿಸಿದ ಕಾರಣಕ್ಕಾಗಿ ಸತ್ಯೇಂದ್ರ ಜೈನ್ ಅವರನ್ನು ಜೈಲಿಗೆ ಕಳುಹಿಸಲಾಯಿತು. ಇಡಿ ಮತ್ತು ಸಿಬಿಐನಂತಹ ಎಲ್ಲಾ ಕೇಂದ್ರೀಯ ಸಂಸ್ಥೆಗಳನ್ನು ಎಎಪಿ ನಾಯಕರ ಮೇಲೆ ಬಿಡಲಾಗಿದೆ ಎಂದಿದ್ದಾರೆ.