ಬೆಂಗಳೂರು, ಫೆ 05 (DaijiworldNews/ AK): ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಅನ್ಯಾಯವಾಗಿತ್ತು ಎನ್ನುವುದಾದರೆ ಬಿಜೆಪಿಯವರು ಸಾಬೀತುಪಡಿಸಲಿ ಎಂದರು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಅನುದಾನ ನೀಡುವ ವಿಚಾರದಲ್ಲಿ ರಾಜ್ಯಕ್ಕೆ ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಮನಮೋಹನ್ ಸಿಂಗ್ ಅವರು ಆರ್ಥಿಕ ತಜ್ಞರಾಗಿ ಬ್ಯಾಲೆನ್ಸ್ ಮಾಡುತ್ತಿದ್ದರು. ಈ ಹಿಂದೆ ಪ್ರವಾಹ ಉಂಟಾದಾಗ ವೈಮಾನಿಕ ಸಮೀಕ್ಷೆ ನಡೆಸಿ ಎರಡು ಸಾವಿರ ಕೋಟಿ ಮಂಜೂರು ಮಾಡಿದ್ದರು. ಅವರ ಅವಧಿಯಲ್ಲಿ ಅನ್ಯಾಯವಾಗಿತ್ತು ಎನ್ನುವುದಾದರೆ ಬಿಜೆಪಿಯವರು ಸಾಬೀತುಪಡಿಸಲಿ ಎಂದರು.
ಜಿಎಸ್ಟಿ ಜಾರಿಯಾದ ನಂತರ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ನಮ್ಮ ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ಪಾಲು ಸಂಪೂರ್ಣವಾಗಿ ಸಿಕ್ಕಿಲ್ಲ. ಬರ ಪರಿಹಾರಕ್ಕೆ 17 ಸಾವಿರ ಕೋಟಿ ರೂ. ಕೇಳಿದರು ಈವರೆಗೂ ಕೊಟ್ಟಿಲ್ಲ ಎಂದು ಆರೋಪಿಸಿದರು.