ಬೆಳಗಾವಿ, ಫೆ 06 (DaijiworldNews/HR): ಯಾವುದೇ ಕಾರಣಕ್ಕೂ ನಾನು ಬಿಜೆಪಿಗೆ ಹೋಗಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಾನು ಬಿಜೆಪಿ ಸೇರ್ಪಡೆಯಾಗಿ ಬೀದರ್ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುತ್ತೇನೆ ಎಂದು ವರದಿಗಳು ಬರುತ್ತಿರುವದು ನನಗೆ ಅಚ್ಚರಿ ಮೂಡಿಸಿದೆ. ಇದೆಲ್ಲಾ ಸುಳ್ಳು ಎಂದರು.
ಇನ್ನು ಅಥಣಿ ಕ್ಷೇತ್ರದ ಜನರು ನನಗೆ ಶಾಸಕನಾಗಿ ಇರುವಂತೆ ಆಶೀರ್ವಾದ ಮಾಡಿದ್ದಾರೆ. ನಾನು ಶಾಸಕನಾಗಿಯೇ ಮುಂದುವರಿಯುವೆ ಎಂದಿದ್ದಾರೆ.
ಯಾವುದೇ ಕಾರಣಕ್ಕೂ ನಾನು ಬಿಜೆಪಿಗೆ ಹೋಗಲ್ಲ. ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.