ಮೈಸೂರು, ಫೆ 06 (DaijiworldNews/HR): ಬಿಜೆಪಿ ಹೆಸರಿಗೆ ಮಾತ್ರ ರಾಮರಾಜ್ಯ ಎನ್ನುತ್ತಾರೆ. ಮಾಡುವುದೆಲ್ಲಾ ಅಧರ್ಮದ ಕೆಲಸ. ಮೋದಿ ಪ್ರಧಾನಿಯಾದ ದಿನದಿಂದಲೇ ಪ್ರಜಾಪ್ರಭುತ್ವದ ಕಗ್ಗೊಲೆ ಶುರುವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಲೋಕಸಭೆಯಲ್ಲಿ ಸಚಿವರು ಸ್ಪರ್ಧೆ ಮಾಡಿದರೆ ತಪ್ಪೇನು? ಕೆಲವು ಆಂತರಿಕ ಚರ್ಚೆ ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಇದು ಹೈಕಮಾಂಡ್ ನಿರ್ಧಾರ. ಅವರ ತೀರ್ಮಾನಕ್ಕೆ ಎಲ್ಲರೂ ಬದ್ದ. ಅವರು ಹೇಳಿದರೆ ಸ್ಪರ್ಧೆ ಮಾಡಲೇ ಬೇಕು. ಇದು ಒಳ್ಳೆಯ ಬೆಳವಣಿಗೆ ಎಂದರು.
ಇನ್ನು ಮೋದಿ ಪ್ರಧಾನಿಯಾದ ದಿನದಿಂದಲೇ ಪ್ರಜಾಪ್ರಭುತ್ವದ ಕಗ್ಗೊಲೆ ಶುರುವಾಗಿದ್ದು, ಸರ್ವಾಧಿಕಾರಿ ಧೋರಣೆ ಎದ್ದು ಕಾಣುತ್ತಿದೆ. ಅವರು ವಿರುದ್ದ ಮಾತನಾಡಿದವರನ್ನು ಮುಗಿಸುವ ಹೆದರಿಸುವ ಬೆದರಿಸುವ ಕೆಲಸ ಮಾಡಲಾಗುತ್ತಿದೆ. ಬಿಜೆಪಿಯವರೇ ಬಿಜೆಪಿ ಕೇಂದ್ರ ಮುಖಂಡರನ್ನು ಪ್ರಶ್ನೆ ಮಾಡುವ ಪರಿಸ್ಥಿತಿ ಇಲ್ಲ. ಮಾಡಿದರೆ ಅವರನ್ನು ಮುಗಿಸುವ ಕೆಲಸ ಮಾಡಲಾಗುತ್ತದೆ ಎಂದು ಆರೋಪಿಸಿದ್ದಾರೆ.