ಬೆಂಗಳೂರು, ಫೆ 08 (DaijiworldNews/ AK): ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ ನಿಷೇಧಕ್ಕೆಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಸಾರ್ವಜನಿಕರ ಆರೋಗ್ಯದ ಕುರಿತು ಕಳವಳ ವ್ಯಕ್ತಪಡಿಸುತ್ತಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹುಕ್ಕಾ ನಿಷೇಧಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಈ ಮೂಲಕ ಅನಾರೋಗ್ಯಕರ ಹುಕ್ಕಾ ಹಾವಳಿಗೆ ಕಡಿವಾಣ ಹಾಕಿದ್ದಾರೆ.
ಸಾರ್ವಜನಿಕರ ಆರೋಗ್ಯವನ್ನು ಕಾಪಾಡಲು ಮತ್ತು ತಂಬಾಕು ಸಂಬಂಧಿತ ರೋಗಗಳ ಹೆಚ್ಚಳವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆಯನ್ನ ನಿಷೇಧಿಸುತ್ತಿರುವುದಾಗಿ ಆರೋಗ್ಯ ಇಲಾಖೆ ತನ್ನ ಆದೇಶದಲ್ಲಿ ತಿಳಿಸಿದೆ.
ವಿಶ್ವ ಆರೋಗ್ಯ, ಸಂಸ್ಥೆ ನಡೆಸಿರುವ ಗ್ಲೋಬಲ್ ಅಡಲ್ಸ್ ಟೊಬ್ಯಾಕೋ ಸರ್ವೇ ಪ್ರಕಾರ 2016-17ಕರಲ್ಲಿ ಕರ್ನಾಟಕದಲ್ಲಿ 22.8% ವಯಸ್ಕರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಾರೆ. ಈ ಪೈಕಿ 8.8% ರಷ್ಟು ಮಂದಿ ಧೂಮಪಾನಿಗಳಾಗಿದ್ದಾರೆ. ಕರ್ನಾಟಕದಲ್ಲಿ 23.9% ವಯಸ್ಕರು ಸಾರ್ವಜನಿಕ ಸ್ಥಳಗಳಲ್ಲಿ ಒಟ್ಟಾಗಿ ಧೂಮಪಾನ ಮಾಡುತ್ತಾರೆ. ಇದು ರಾಜ್ಯದಲ್ಲಿ ತಂಬಾಕು ಸೇವನೆಯ ವ್ಯಾಪಕ ಅಪಾಯಕ್ಕೆ ಕಾರಣವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹುಕ್ಕಾ ಉತ್ಪನ್ನಗಳ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.