ಬೆಂಗಳೂರು, ಫೆ 08 (DaijiworldNews/MS): ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ವಿರೋಧಿಸಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮಸಿ ಬಳಿದ ಘಟನೆ ಇಂದು ಬೆಂಗಳೂರಿನಲ್ಲಿ ನಡೆದಿದೆ.
ನಿನ್ನೆ ತಾನೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಕಾಂಗ್ರೆಸ್ ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದು, ಈ ವಿಚಾರವಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕಿಡಿಕಾರಿದ್ದು" ಕೇಂದ್ರದಿಂದ ರಾಜ್ಯಗಳಿಗೆ ಹಂಚಿಕೆಯಾದ ಅನುದಾನದ ವಿಚಾರದಲ್ಲಿ ಸುಳ್ಳು ಮಾಹಿತಿಗಳನ್ನು ಹರಡಿಸುತ್ತಿದೆ" ಎಂದು ಹೇಳಿದ್ದರು.
ಈ ಪ್ರತಿಭಟನೆಯ ಮುಂದಿನ ಭಾಗವಾಗಿ NSUIನ ಕಾರ್ಯಕರ್ತರು ಬೆಂಗಳೂರಿನ ಮಿಲ್ಲರ್ಸ್ ರಸ್ತೆಯಲ್ಲಿರುವ ಕೇಂದ್ರ ಹಣಕಾಸು ಸಚಿವೆ ಕಚೇರಿಯ ನಾಮಫಲಕಕ್ಕೆ ಮಸಿ ಬಳಿದಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ ಪೊಲೀಸರು. ಸೂರಜ್, ಲಕ್ಷ್ಯ ರಾಜ್, ನಿಶ್ಚಯ್ ಗೌಡ, ನರೇಶ್, ಕಾರ್ತಿಕ್ ಸೇರಿ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದ್ರೂ ಪ್ರಧಾನಿಗಳ ಬಳಿ ರಾಜ್ಯದ ಬಿಜೆಪಿ ಸಂಸದರು ಮಾತನಾಡದೇ ಮೌನವಾಗಿದ್ದಾರೆ ಎಂದು ಇದೇ ವೇಳೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.