ನವದೆಹಲಿ, ಫೆ 09 (DaijiworldNews/MS): ಕೇಂದ್ರ ಸರ್ಕಾರ ಭಾರತದಲ್ಲಿ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿಯನ್ನು ಮಾಜಿ ಪ್ರಧಾನಿಗಳಾದ ಪಿವಿ ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು ಕೃಷಿ ವಿಜ್ಞಾನಿ ಡಾ.ಎಂ.ಎಸ್.ಸ್ವಾಮಿನಾಥನ್ ಅವರಿಗೆ ಘೋಷಿಸಿದೆ.
ಕಳೆದ ವಾರವಷ್ಟೇ ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ಧುರೀಣ ಎಲ್ ಕೆ ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿ 'ಭಾರತ ರತ್ನ' ಘೋಷಿಸಿದ್ದು, ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಶುಕ್ರವಾರ ಮೂವರಿಗೆ ಭಾರತ ರತ್ನ ಪ್ರದಾನ ಮಾಡುವುದಾಗಿ ಘೋಷಿಸಿದೆ. ಶುಕ್ರವಾರ ಮಾಜಿ ಪ್ರಧಾನಿಗಳಾದ ಚರಣ್ ಸಿಂಗ್ ಮತ್ತು ಪಿವಿ ನರಸಿಂಹರಾವ್ ಮತ್ತು ಭಾರತದ 'ಹಸಿರು ಕ್ರಾಂತಿ'ಯಲ್ಲಿ ಪ್ರಮುಖ ಪಾತ್ರಕ್ಕೆ ಹೆಸರುವಾಸಿಯಾದ ಕೃಷಿ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ವನ್ನು ಘೋಷಿಸಿದೆ.
ಸಾಮಾನ್ಯವಾಗಿ ಒಂದು ವರ್ಷದಲ್ಲಿ ಮೂರು ಭಾರತ ರತ್ನ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಆದಾಗ್ಯೂ, ಈ ವರ್ಷ, ಹಿರಿಯ ಬಿಜೆಪಿ ನಾಯಕ ಎಲ್ಕೆ ಅಡ್ವಾಣಿ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಸೇರಿದಂತೆ ಐದು ಜನರನ್ನು ಭಾರತ ರತ್ನಕ್ಕೆ ಸರ್ಕಾರ ಹೆಸರಿಸಿದೆ