ನವದೆಹಲಿ, ಫೆ 09 (DaijiworldNews/AA): ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಭೇಟಿಯಾಗಿದ್ದಾರೆ.
ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಮೋದಿ ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿದ್ದು, ಸುಮಾರು 90 ನಿಮಿಷಗಳ ಕಾಲ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಆದರೆ ಈ ಭೇಟಿಯ ಹಿಂದಿನ ಮರ್ಮವೇನು? ಭೇಟಿ ವೇಳೆ ಯಾವ್ಯಾವ ವಿಚಾರಗಳನ್ನು ಚರ್ಚಿಸಿದ್ದಾರೆ ಎಂದು ಮಾಹಿತಿ ಇಲ್ಲ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ವೈಎಸ್ ಆರ್ ಸಿಪಿಯ ಹಿರಿಯ ನಾಯಕರು ಮತ್ತು ರಾಜ್ಯಸಭಾ ಸದಸ್ಯರಾದ ವಿ ವಿಜಯಸಾಯಿ ರೆಡ್ಡಿ ಮತ್ತು ಆರ್ ಕೃಷ್ಣಯ್ಯ, ತಿರುಪತಿ ಲೋಕಸಭಾ ಸಂಸದ ಎಂ ಗುರುಮೂರ್ತಿ ಮತ್ತಿತರರು ಉಪಸ್ಥಿತರಿದ್ದರು ಎನ್ನಲಾಗಿದೆ.