ಹುಬ್ಬಳ್ಳಿ, ಫೆ 10(DaijiworldNews/AK):2023ರ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ವಿರುದ್ಧ ಕಿಡಿಕಾರುತ್ತಿದ್ದರು. ಆದರೆ ಇದೀಗ ಮತ್ತೆ ಬಿಜೆಪಿ ಸೇರಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೋಡ್ಸೇ ಗಾಂಧಿಯನ್ನ ಹತ್ಯೆ ಮಾಡಿದ್ದಾರೆ ಎನ್ನುತ್ತಲೇ 70 ವರ್ಷ ಕಾಂಗ್ರೆಸ್ನವರು ಸರ್ಕಾರ ನಡೆಸಿಕೊಂಡು ಬಂದಿದ್ದಾರೆ. ಅದಕ್ಕೆ ಬಿಜೆಪಿ (BJP) ಕೂಡ ಉತ್ತರ ಕೊಟ್ಟಿದೆ. ಅದನ್ನೇ ಪದೇ-ಪದೇ ಹೇಳಿ ಜನರನ್ನ ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಶೆಟ್ಟರ್ ಹೇಳಿದ್ದಾರೆ.
ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಎಂಬ ಕೆ.ಎಸ್ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರೇ ಆಗಲಿ ಲಕ್ಷ್ಮಣ ರೇಖೆ ದಾಟಬಾರದು ಎಂದು ಈಶ್ವರಪ್ಪರನ್ನ ಸಮರ್ಥಿನೆ ಮಾಡಿದರು.
ಇನ್ನೂ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಸ್ಪರ್ಧೆ ವಿಚಾರವಾಗಿ ಮಾತನಾಡಿ, ಪಕ್ಷದ ಹೈಕಮಾಂಡ್ ನಾಯಕರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಕುರಿತು ಸಭೆಯಲ್ಲಿ ಚರ್ಚೆಗಳಾಗಿವೆ.ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಪಕ್ಷದ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು, ಈ ಬಗ್ಗೆ ಪಕ್ಷದ ನಾಯಕರು ಯಾರೂ ಚರ್ಚೆ ಮಾಡಿಲ್ಲ. ಪಕ್ಷದ ನಾಯಕರ ಯಾವುದೇ ನಿರ್ಧಾರಕ್ಕೆ ನಾನು ಬದ್ಧ ಎಂದರು.