ಕೆಆರ್ ಪೇಟೆ,ಫೆ 10(DaijiworldNews/SK): ಕೇಂದ್ರ ಸರ್ಕಾರ ಬರಪರಿಹಾರಕ್ಕೆ ಒಂದು ರೂಪಾಯಿ ಹಣ ಬಿಡುಗಡೆ ಮಾಡಿಲ್ಲ ಶೀಘ್ರ ಬಿಡುಗಡೆ ಮಾಡುವುದು ಸರ್ಕಾರದ ಜವಾಬ್ದಾರಿ. ಕೇಂದ್ರ ಸರ್ಕಾರವೇನು ಅಮೆರಿಕದಿಂದ ಹಣ ತರುವುದಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಕೆಆರ್ ಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ ಅವರು, ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸಾಕಷ್ಟು ತೆರಿಗೆ ಹೋಗುತ್ತದೆ. ಆದರೆ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ.
ಕೇಂದ್ರಕ್ಕೆ ತೆರಿಗೆ ಕಟ್ಟುವಲ್ಲಿ ಮಹಾರಾಷ್ಟ್ರ ಬಿಟ್ಟರೆ ಅತಿ ಹೆಚ್ಚು ತೆರಿಗೆ ಕೊಡುತ್ತಿರುವುದು ಕರ್ನಾಟಕ ಮಾತ್ರ. ಅತಿ ಕಡಿಮೆ ತೆರಿಗೆ ಕೊಡುವ ಉತ್ತರ ಪ್ರದೇಶಕ್ಕೆ ಹೆಚ್ಚು ಅನುದಾನ ಕೊಡುವ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಾತ್ರ ಕಡಿಮೆ ಅನುದಾನ ನೀಡುತ್ತಿದೆ.
ಇನ್ನು ಬರಗಾಲದಲ್ಲಿ 18000 ಕೋಟಿ ಎನ್ಡಿಆರ್ಎಫ್ ಫಂಡ್ ಕೇಳಿದ್ದೆವು. ಆದರೆ ಆ ಬಗ್ಗೆ ಇನ್ನೂ ಒಂದು ಸಭೆ ಕೂಡ ಮಾಡಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.