ಶ್ರೀನಗರ, ಫೆ(DaijiworldNews/SK): ನಿಷೇಧಿತ ಜಮಾತ್–ಎ–ಇಸ್ಲಾಮಿ ಸಂಘಟನೆಗೆ ಸಂಬಂಧಿಸಿದ ಉಗ್ರ ಚಟುವಟಿಕೆಗೆ ಹಣಕಾಸು ನೆರವು ನೀಡಿದ ಪ್ರಕರಣದ ಭಾಗವಾಗಿ ಫೆ 10 ರಂದು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಜಮ್ಮು ಮತ್ತು ಕಾಶ್ಮೀರದ 15 ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ತನಿಖಾ ಸಂಸ್ಥೆಯ ವಕ್ತಾರರು ಮಾಹಿತಿ ನೀಡಿದ್ದಾರೆ.
ಶೋಧ ನಡೆಸಿದ ರಾಷ್ಟ್ರೀಯ ತನಿಖಾ ದಳವು ಶ್ರೀನಗರ, ಜಮ್ಮು, ಬುದ್ಗಾಂ, ಕುಲ್ಗಾಂ ಮತ್ತು ಅನಂತ್ನಾಗ್ ನಲ್ಲಿ ಉಗ್ರ ಸಂಘಟನೆ ಮತ್ತು ಅದರ ಟ್ರಸ್ಟ್ಗೆ ಸಂಬಂಧಿಸಿದ ದಾಖಲೆಗಳು ಮತ್ತು ಡಿಜಿಟಲ್ ಸಾಧನಗಳು ಹಾಗೂ 20 ಲಕ್ಷ ರೂ. ಮೊತ್ತವನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಾಗಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.