ಮೈಸೂರು, ಫೆ 11 (DaijiworldNews/HR): ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಾಂಸ್ಕೃತಿಕ ಪುನರ್ ಪ್ರತಿಷ್ಠಾಪನೆಯಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ದೇಶಾದ್ಯಂತ ನಮ್ಮ ಸಂಸ್ಕೃತಿ ಪುನರ್ ಸ್ಥಾಪನೆ ಆಗುತ್ತಿದ್ದು, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಿದೆ. ಕಾಶಿ, ಉಜ್ಜಯಿನಿ, ಬದರಿನಾಥ್ ಕಾರಿಡಾರ್ ಅಭಿವೃದ್ಧಿಯಾಗಿವೆ ಎಂದರು.
ಇನ್ನು ದೇಶದ ಆಯುರ್ವೇದ, ಯೋಗ, ಭಾಷೆ, ಸಂಸ್ಕೃತಿ ಪುನರ್ ಸ್ಥಾಪನೆಯಾಗುತ್ತಿದ್ದು, ಸುತ್ತೂರು ಮಠವೂ ಅಯೋಧ್ಯೆಯಲ್ಲಿ ಅತಿಥಿ ಗೃಹ ನಿರ್ಮಿಸುತ್ತಿದೆ ಎಂದಿದ್ದಾರೆ.
ಸುತ್ತೂರು ಮಠ 24 ಪೀಠಾಧಿಪತಿಗಳನ್ನು ಕಂಡಿದ್ದು, ಅವರೆಲ್ಲರಿಗೂ ನನ್ನ ಪ್ರಣಾಮಗಳು. ಕರ್ನಾಟಕದಂತಹ ಪವಿತ್ರ ಭೂಮಿಯಲ್ಲಿ ನಿಂತು ಎಲ್ಲರಿಗೂ ನಮಸ್ಕರಿಸುತ್ತೇನೆ. ಕರ್ನಾಟಕ ಪುಣ್ಯಭೂಮಿಯಲ್ಲಿ ಬಸವಣ್ಣರನ್ನು ನೆನಪಿಸುತ್ತೇನೆ ಎಂದು ಹೇಳಿದ್ದಾರೆ.