ಹಾವೇರಿ, ಫೆ 11 (DaijiworldNews/HR): ಬಿ.ವೈ ವಿಜಯೇಂದ್ರ ಅವರೊಂದಿಗೆ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಅಪ್ಪ-ಮಕ್ಕಳ ಜೊತೆಗೆ ನಾನು ರಾಜಿಯಾಗಬೇಕಾ? ನನಗೆ ರಾಜಿ ಅವಶ್ಯಕತೆ ಇಲ್ಲ. ಬಿ.ವೈ.ವಿಜಯೇಂದ್ರನಿಂದ ನನಗೇನೂ ಆಗಬೇಕಾಗಿಲ್ಲ ಎಂದರು.
ಇನ್ನು ನರೇಂದ್ರ ಮೋದಿ ಮತ್ತೆ ಪ್ರಧಾನಮಂತ್ರಿ ಆಗಬೇಕು ಅಷ್ಟೆ. ವಿಜಯೇಂದ್ರ ಅವರ ಉದ್ದೇಶ ಏನು. ವಿ.ಸೋಮಣ್ಣ ಅವರ ಮೇಲೆ ಏನು ಮಾಡಿದ್ದಾರೆ? ವಿಜಯಪುರದಲ್ಲಿ ಏನ್ ಮಾಡಿದ್ದಾರೆ ಎಲ್ಲಾ ಗೊತ್ತು. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೋಲಿಸುವುದಕ್ಕೆ ಏನು ಮಾಡಿದ್ದಾರೆ. ಇವರ ಎಲ್ಲಾ ಇತಿಹಾಸ ಗೊತ್ತಿದೆ. ಲೋಕಸಭೆ ಚುನಾವಣೆ ಬಳಿಕ ಹೇಳುತ್ತೇನೆ ಎಂದಿದ್ದಾರೆ.